ಕುಂಬಳೆ: ಸ್ಥಳೀಯ ಪಂಜಿಕಲ್ ಫ್ರೆಂಡ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್‌ನ ೪ನೇ ವರ್ಷದ ವಾರ್ಷಿಕೋತ್ಸವ ಹಾಗೂ ಓಣಂ ಸಂಭ್ರಮಾಚರಣೆಯು ಕ್ಲಬ್ ಅಂಗಳದಲ್ಲಿ ವಿಜೃಂಭಣೆಯಿಂದ ಜರುಗಿತು. ನೂರಾರು ಸಾರ್ವಜನಿಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಹಾಗೂ ಕ್ವಿಜ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸಮಾರಂಭದ ಮುಖ್ಯ ಆಕರ್ಷಣೆಯಾಗಿ ಕಾಸರಗೋಡಿನ 'ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ'ಯ ಕಲಾವಿದರಿಂದ 'ಸಾಂಸ್ಕೃತಿಕ ಕಲಾ ವೈಭವ' ಪ್ರದರ್ಶನ ಜರುಗಿತು. ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಮತ್ತು ನಿರೂಪಣೆಯಲ್ಲಿ ಮೂಡಿಬಂದ ಈ ವೈವಿಧ್ಯಮಯ ಕಲಾ ಪ್ರಸ್ತುತಿ ಜನಮನ ಸೂರೆಗೊಂಡಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಗಡಿನಾಡ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕಾಸರಗೋಡು ಅವರನ್ನು ಕ್ಲಬ್ ವತಿಯಿಂದ ಶಾಲು ಹೊದೆಸಿ ಗೌರವಿಸಲಾಯಿತು.
ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಕ್ಲಬ್ ಅಧ್ಯಕ್ಷ ಮೋಹನ್ ಮಡ್ವ, ಧಾರ್ಮಿಕ ಮುಖಂಡ ಮಂಜುನಾಥ ಆಳ್ವ ಮಡ್ವ ಹಾಗೂ ಉಪಸ್ಥಿತರಿದ್ದ ಗಣ್ಯರು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

