ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಗ್ರಂಥಾಲಯ ಮಾಹಿತಿ ಮತ್ತು ವಿಜ್ನಾನ ವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇತ್ತೀಚೆಗಷ್ಟೆ ನಿವೃತ ಗ್ರಂಥಪಾಲಕರಾದ ರವಿಚಂದ್ರ.ಭಾರತದ ಗ್ರಂಥಾಲಯಗಳ ಬೆಳವಣಿಗೆಗೆ ಗ್ರಂಥಾಲಯಗಳ ಪಿತಾಮಹ ಡಾ. ಎಸ್.ಆರ್. ರಂಗನಾಥನ್‍ರವರ ಕೊಡುಗೆಗಳನ್ನು ವಿವರಿಸುತ್ತಾ ಓಎನ್‍ಓಎಸ್‍ನ ಔಚಿತ್ಯ ಮತ್ತು ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. 


(INFLIBNET)ಇನ್‍ಪಾರ್ಮೇಶನ್ ಮತ್ತು ಲೈಬ್ರರಿ ನೆಟ್‍ವರ್ಕ್ ನಿಂದ ಯಾವ ರೀತಿಯಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಮತ್ತು ಸುಲಭವಾಗಿ ಮಾಹಿತಿಗಳನ್ನು ಪಡೆಯಬಹುದೆಂಬುದನ್ನು ವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ ಪುಸ್ತಕಗಳ ಓದು ಕ್ಷೀಣಿಸುತ್ತಿರುವ ಇಂದಿನ ಸಂದರ್ಭದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ರೂಪದಲ್ಲಿ ದೊರೆಯುವ ಮಾಹಿತಿಗಳನ್ನು ಬಳಸಿಕೊಂಡಾದರೂ ಜ್ಞಾನ ಸಂಪಾದಿಸಬೇಕೆಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರೆ ಸಂಖ್ಯಾಶಾಸ್ತ್ರಸಹ ಪ್ರಾಧ್ಯಾಪಕ ಉಮೇಶ್ ಪೈ. ವಂದನಾರ್ಪಣೆಗೈದರು. 


ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಕಾರ್ಯಕ್ರಮ ಆಯೋಜಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಬಿಂದು ಟಿ. ಆಂಗ್ಲ ಭಾಷೆ ಸಹಪ್ರಧ್ಯಾಪಕರಾದ ಡಾ. ಗೀತಾ,ಅರ್ಥಶಾಸ್ತ್ರ ಸಹಪ್ರಾಧ್ಯಾಪಕರಾದ ಡಾ. ಜಯಮಂಗಳ,ಕನ್ನಡ ಸಹಾಯಕ ಪ್ರಾಧ್ಯಾಪಕ ಮಾರುತಿ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಬಾಲ್ ರಾಜ್, ಆರತಿ ಜಿ ಇನ್ನಿತರ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ರವಿಚಂದ್ರ ರವಿಚಂದ್ರರವರನ್ನು ಸನ್ಮಾನಿಸಲಾಯಿತು ಹಾಗೂ ಡಾ. ಎಸ್.ಆರ್. ರಂಗನಾಥನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top