ಮಂಗಳೂರು: ಯೂತ್ ರೆಡ್‌ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ ಮತ್ತು ವಿ.ವಿ.ಕಾಲೇಜಿನ ಯೂತ್ ರೆಡ್‌ಕ್ರಾಸ್, ಎನ್‌ಎಸ್‌ಎಸ್ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕೋಶದ ಸಹಯೋಗದಲ್ಲಿ ಆ.29ರಂದು ಬೆಳಗ್ಗೆ 9.30ಕ್ಕೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ವಿಕಸಿತ ಭಾರತಕ್ಕಾಗಿ ನಶೆ ಮುಕ್ತ ಯುವ ವಿಷಯದ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕಿರು ನಾಟಕ (ಸ್ಕಿಟ್) ಸ್ಪರ್ಧೆ ನಡೆಯಲಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಎಸಿಪಿ ವಿಜಯಕ್ರಾಂತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾ.ಸತೀಶ್‌ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

