ನಂತೂರು, ಆ.15 : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ 2026ರ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು.
ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ದಿವಾಣ ಗೋವಿಂದ ಭಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಮಾತನಾಡಿ, ವಿದ್ಯಾರ್ಥಿಗಳು ಸ್ವಾತಂತ್ರ್ಯದ ಮೌಲ್ಯವನ್ನು ಅರಿತು ಬಾಳಬೇಕು ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಪಾತ್ರವು ಮಹತ್ವಪೂರ್ಣವಾದದ್ದು ಎಂದು ತಿಳಿಸಿದರು.
ಸೇವಾ ಸಮಿತಿ ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಕುಡ್ಲದ ಅಧ್ಯಕ್ಷ ಯೋಗೀಶ್ ಕುಮಾರ್, ಕಾರ್ಯದರ್ಶಿ ಹರೀಶ್ ಉಜ್ಜೋಡಿ, ಸದಸ್ಯರು, ಪ್ರಾಂಶುಪಾಲ ಸಂದೀಪ್ ಆಚಾರ್ಯ ಉಪಸ್ಥಿತರಿದ್ದರು.
ಪ್ರಥಮ ಪಿ. ಯು. ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಜೀವನ್ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವರ್ಷಿಣಿ ಸ್ವಾಗತಿಸಿದರು. 10ನೇ ತರಗತಿಯ ತನಿಷ್ಕ ವಂದಿಸಿದರು. ವಿಜ್ಞಾನ ವಿಭಾಗದ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.
ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

