ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Upayuktha
0

  


ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಉದ್ಘಾಟನಾ ಸಮಾರಂಭ ಹಾಗೂ ಐಸಿಎಐ ಉಡುಪಿ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ CAFY & Super Mega Career Counselling ಕಾರ್ಯಕ್ರಮ ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು.


ವೃತ್ತಿ ಮಾರ್ಗದರ್ಶಕರಾಗಿ ಉಡುಪಿ ಶಾಖೆಯ ICAIಯ ಮಾಜಿ ಅಧ್ಯಕ್ಷರಾದ CA. ಲೋಕೇಶ್ ಶೆಟ್ಟಿ ಅವರು ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ್ನು ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆನ್ಸಿ (CA) ವೃತ್ತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ವೃತ್ತಿ ಸಂಬಂಧಿತ ಮಾಹಿತಿಯನ್ನು ಪಡೆದುಕೊಂಡರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನದ ಬಗ್ಗೆ ಉತ್ತಮ ಗುರಿ ಹೊಂದಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು CA. ಲಕ್ಷ್ಮೀಶ ಕೆ. ರಾವ್ ಅವರು ಸಮರ್ಥವಾಗಿ ನಿರ್ವಹಿಸಿದರು. ಪ್ರಥಮ ಬಿಬಿಎ ವಿದ್ಯಾರ್ಥಿ ಆದಿತ್ಯ ಅವರು ಮುಖ್ಯ ಅತಿಥಿ CA. ಲೋಕೇಶ್ ಶೆಟ್ಟಿ ಅವರ ಪರಿಚಯವನ್ನು ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಸಂಚಾಲಕರಾದ ಕು. ಕಾವ್ಯಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top