ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಂಡಾಜೆ ಇವರ ಸಹಯೋಗದಲ್ಲಿ ಮುಂಡಾಜೆಯ ಅಗರಿ ಗದ್ದೆಯಲ್ಲಿ "ಕೆಸರ್ದ ಗೊಬ್ಬು" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ನಾರಾಯಣಶೆಟ್ಟಿ ಅಗರಿ ಇವರು ಉದ್ಘಾಟಿಸಿದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಇವರು ಮಾತನಾಡಿ, 'ಗ್ರಾಮೀಣ ಬದುಕಿನ ಸಂಸ್ಕೃತಿ-ಸೊಗಡನ್ನು ಉಳಿಸಿ ಬೆಳೆಸಬೇಕು. ಇಂದಿನ ಜನಾಂಗಕ್ಕೆ ಗ್ರಾಮೀಣ ಬದುಕಿನ ಅರಿವಾಗಬೇಕು' ಎಂದರು.
ಕಾರ್ಯಕ್ರಮದಲ್ಲಿ ಊರಿನ ಪ್ರಮುಖರಾದ ದಾಮೋದರ್ ಶೆಟ್ಟಿ ಅಗರಿ, ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಚಂದ್ರಮತಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೇಜಿ ನಾಟಿಯ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ಕೆಸರಿನ ಗದ್ದೆಯಲ್ಲಿ ವಿವಿಧ ಆಟೋಟಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ನಿರೂಪಿಸಿ, ನಮಿತಾ ಕೆ ಆರ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

