ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ "ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ" ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು.
ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಡಿರುದ್ಯಾವರ ಗ್ರಾಮದ, ಕೊಂದೋಡಿಯ ಜಯಪ್ರಕಾಶ್ ಇವರು ವಿದ್ಯಾರ್ಥಿಗಳಿಗೆ, ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯಲ್ಲಿರುವ ಉದ್ಯೋಗ ಪಡೆಯಲು ಬೇಕಾದ ಅರ್ಹತೆಗಳು, ಆಯ್ಕೆ ಪ್ರಕ್ರಿಯೆ, ಕೆಲಸದ ಸ್ವರೂಪ ಹಾಗೂ ಅಗ್ನಿವೀರ್ ಆಯ್ಕೆ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ರೇಂಜರ್ ಲೀಡರ್ ವಸಂತಿ ಶುಭ ಹಾರೈಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

