ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0


ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಎಸ್. ಡಿ. ಎಂ ಪದವಿ ಪೂರ್ವ ಕಾಲೇಜು ಉಜಿರೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ. ವಿ. ಇವರು ಮಾರ್ಗದರ್ಶನ ಮಾಡಿದ್ದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ವ್ಯವಸ್ಥೆ ಗೊಳಿಸಿದ್ದರು. ಕಾಲೇಜಿನ ಎಲ್ಲ ಉಪನ್ಯಾಸಕರು ಸಹಕರಿಸಿದ್ದರು. ಸರಕಾರಿ ಸಂಸ್ಥೆಯ ಮಕ್ಕಳ ಈ ಸಾಧನೆ ಪ್ರಶಂಸನೀಯವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top