ಗಮನ ಸೆಳೆದ ನಳಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Upayuktha
0


ಬೆಂಗಳೂರು: ಜೆ ಪಿ ನಗರದಲ್ಲಿರುವ ಪ್ರತಿಷ್ಠಿತ ನಳಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಹಲವು ವಿಶೇಷತೆಗಳಿಂದ ಗಮನ ಸೆಳೆಯಿತು.


ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ ಎಸ್ ಜಾನಕಿ ಅವರ ವಿವಿಧ ಭಾಷೆಯ ಹಾಡುಗಳನ್ನು ವಿದ್ಯಾರ್ಥಿಗಳು ಹಾಗು ನೃತ್ಯದ ಮೂಲಕ ಪ್ರಸ್ತುತಪಡಿಸುವ ಮೂಲಕ ಅಗಲಿದ ಗಾನ ಕೋಗಿಲೆಗೆ ಗೌರವ ನಮನ ಸಲ್ಲಿಸಿದರು.


ಮಿಸ್ ಇಂಡಿಯಾ ಕಿರೀಟ ವಿಜೇತ ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಗೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಕೂಡ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸಿದೆ ಎಂದು ಹೇಳಿದರು.


ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಹಾಗೂ ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಮಿತಾಪ್ರಭು ಬಹುಮಾನ ವಿತರಣೆ ಮಾಡಿದರು.


ಈ ವೇಳೆ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್ ಸೇರಿದಂತೆ ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top