ವಿಶ್ವದ ಹಾಕಿ ಮಾಂತ್ರಿಕದ್ಯಾನ್‍ಚಂದ್ : ರವಿಶಂಕರ್ ವಿ. ಎಸ್

Upayuktha
0

  


ಪುತ್ತೂರು: ದ್ಯಾನ್‍ಚಂದ್ ಕೇವಲ ಉತ್ತಮ ಕ್ರೀಡಾಪಟು ಮಾತ್ರವಲ್ಲದೆ ದೇಶ ಪ್ರೇಮಿಯೂ ಹೌದು. ಅವರಂತೆ ಪ್ರತಿಯೊಬ್ಬರೂದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ವಿಶ್ವದ ಹಾಕಿ ಒಲಂಪಿಕ್ಸ್‍ನಲ್ಲಿ ಪ್ರಪ್ರಥಮ ಬಾರಿಗೆ ಭಾರತಕ್ಕೆ ಹ್ಯಾಟ್ರಿಕ್‍ ಚಿನ್ನದ ಪದಕವನ್ನು ತಂದುಕೊಟ್ಟವರು ದ್ಯಾನ್‍ಚಂದ್. ಹೀಗಾಗಿ ಅವರ ಜನ್ಮದಿನವನ್ನು ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸುವ ಮೂಲಕ ಅವರ ಸಾಧನೆಯನ್ನು ಸ್ಮರಿಸಿಕೊಳ್ಳುತ್ತೇವೆ ಎಂದುದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರವಿಶಂಕರ್ ವಿ.ಎಸ್ ಹೇಳಿದರು. 


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಐಕ್ಯೂಎಸಿ ಘಟಕ,ಕ್ರೀಡಾ ಸಂಘ, ವಿದ್ಯಾರ್ಥಿ ಸಂಘ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. 


ಕಾಲೇಜಿನ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ್ ಭಟ್‍ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 


ವೇದಿಕೆಯಲ್ಲಿ ಪರೀಕ್ಷಾಂಗ ಕುಲಸಚಿವ ಪ್ರಕಾಶ್‍ಕುಮಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ವಿಶೇಷ ಅಧಿಕಾರಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ್ ಎಂ ನಿರ್ವಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top