ನವಿಮುಂಬೈನಲ್ಲಿ ವಿಶಿಷ್ಟ ಮಾನವ ಸರಪಳಿಯೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Upayuktha
0

 


ನವಿಮುಂಬೈ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನವಿಮುಂಬೈ ಮಹಾನಗರದಲ್ಲಿ ವಿಶಿಷ್ಟವಾದ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾವಿರಾರು ದೇಶಪ್ರೇಮಿಗಳು ಉತ್ಸಾಹದಿಂದ ಭಾಗವಹಿಸಿ, ‘ವಂದೇ ಮಾತರಂ’ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡುವ ಮೂಲಕ ದೇಶಭಕ್ತಿಯನ್ನು ಮೆರೆದರು.


ಆಯೋಜಕರ ಆಹ್ವಾನದ ಮೇರೆಗೆ ಪರಮಪೂಜ್ಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತಮಾತೆಗೆ ಆರತಿ ಬೆಳಗಿ ಗೌರವ ಸಮರ್ಪಿಸಿದರು. ಬಳಿಕ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡು ನೆರೆದಿದ್ದ ಜನತೆಗೆ ಆಶೀರ್ವಚನ ನೀಡಿದರು.


ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಕಾರ್ಯಕ್ರಮವಾಗಿ ಆಯೋಜಿಸಲಾದ ಈ ಬೃಹತ್ ಮಾನವ ಸರಪಳಿ ನವಿಮುಂಬೈಯ ಜನತೆಯ ಗಮನ ಸೆಳೆದು, ದೇಶಪ್ರೇಮ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top