5 ಕಿ.ಮೀ ಫ್ರೀಡಂ ರನ್ ನಲ್ಲಿ ನಿಟ್ಟೆ ಅಥ್ಲೀಟ್ ಗಳ ಸಾಧನೆ

Upayuktha
0


ಕಾರ್ಕಳ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮುಲ್ಕಿಯ ಕರ್ನಾಡಿನಲ್ಲಿ ಕೊಂಬನ್ ಫಿಟ್ನೆಸ್ ಸಂಸ್ಥೆಯು ಆಯೋಜಿಸಿದ್ದ 5 ಕಿ.ಮೀ ‘ಫ್ರೀಡಂ ರನ್’ ಗ್ರಾಂಡ್ ಫಿನಾಲೆಯಲ್ಲಿ ನಿಟ್ಟೆ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ನಿಟ್ಟೆಯ ಡಾ. ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ತೃತೀಯ ವರ್ಷದ ಬಿ.ಕಾಂ ವಿದ್ಯಾರ್ಥಿನಿಯಾದ ನಂದಿನಿ ಜಿ. ಅವರು ಓಟದ ಸ್ಪರ್ಧೆಯಲ್ಲಿ ಅತ್ಯಂತ ವೇಗವಾಗಿ ಗುರಿ ತಲುಪಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಇವರೊಂದಿಗೆ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ (ಸಿಎಸ್ಸಿ) ವಿದ್ಯಾರ್ಥಿನಿ ಸಾಕ್ಷಿ ಅವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ಕಠಿಣ ಸ್ಪರ್ಧೆಯ ನಡುವೆಯೂ ಅತ್ಯುತ್ತಮ ಸಾಹಸ ಪ್ರದರ್ಶಿಸಿ ಸಂಸ್ಥೆಗೆ ಕೀರ್ತಿ ತಂದ ಈ ಇಬ್ಬರು ಅಥ್ಲೀಟ್‌ಗಳ ಸಾಧನೆಯನ್ನು ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಉಪನ್ಯಾಸಕ ವೃಂದದವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top