ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ

Upayuktha
0


ಧರ್ಮತ್ತಡ್ಕ:  ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಶಾಲಾ ವಿಭಾಗದಲ್ಲಿ ಓಣಂ ಹಬ್ಬವನ್ನು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಂಪ್ರದಾಯಿಕ ಆಟೋಟ ಸ್ಪರ್ಧೆ ಹಾಗೂ ಓಣಂ ಭೋಜನದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.


ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎನ್. ರಾಮಚಂದ್ರ ಭಟ್ ಅವರು ಓಣಂ ಆಚರಣೆಯ ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್, ಮುಖ್ಯೋಪಾಧ್ಯಾಯರಾದ ಶ್ರೀ ಶಶಿಕುಮಾರ್ ಪಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ದಿನೇಶ್ ಚೆರುಗೋಳಿ, ಮಾತೃಮಂಡಳಿ ಅಧ್ಯಕ್ಷೆ ಪಾವನ ಎ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಓಣಂ ಹಬ್ಬದ ಪ್ರಮುಖ ಆಕರ್ಷಣೆಯಾಗಿ ಎಲ್ಲಾ ತರಗತಿಗಳಲ್ಲಿಯೂ ವಿದ್ಯಾರ್ಥಿಗಳು ವಿವಿಧ ಬಣ್ಣಗಳ ಹೂವುಗಳಿಂದ ಸುಂದರವಾದ ಪೂಕಳಂ (ಹೂವಿನ ರಂಗೋಲಿ) ರಚಿಸಿ ಮಹಾಬಲಿ ಚಕ್ರವರ್ತಿಯನ್ನು ಸಡಗರದಿಂದ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರು ಮನಮೋಹಕ ತಿರುವಾತಿರ ನೃತ್ಯ ಹಾಗೂ ಕೈಕೊಟ್ಟುಕಳಿ ನೃತ್ಯವನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.


ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಸ್ಪೂರ್ತಿಯನ್ನು ಮೆರೆದರು.


ಓಣಂ ಹಬ್ಬದ ಪ್ರಯುಕ್ತ ಶಾಲೆಯ ಹಾಗೂ ರಕ್ಷಕ-ಶಿಕ್ಷಕ ಸಂಘದ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ರುಚಿಕರವಾದ ಓಣಂ ಭೋಜನವನ್ನು ವಿತರಿಸಲಾಯಿತು. ಮಾತೃ ಮಂಡಳಿಯ ಅಧ್ಯಕ್ಷೆಯಾದ ಪಾವನ.ಎ ವಿದ್ಯಾರ್ಥಿಗಳಿಗೆ ಪಾಯಸವನ್ನು ನೀಡಿದರು.


ವಿದ್ಯಾರ್ಥಿಗಳು ಒಟ್ಟಾಗಿ ಓಣಂ ಊಟ ಸವಿದು ಹಬ್ಬದ ಸಂತಸವನ್ನು ಹಂಚಿಕೊಂಡರು.


ಸಂಜೆ ನಡೆದ ವಿಶೇಷ ಅಸೆಂಬ್ಲಿಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಹಬ್ಬದ ಆಚರಣೆಯಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ, ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top