ಪರ್ಕಳ : ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪರ್ಕಳ ಇದರ ಸಹಯೋಗದೊಂದಿಗೆ ಪರ್ಕಳದ ಗಣೇಶೋತ್ಸವದ ಪ್ರಯುಕ್ತ ದಿನಾಂಕ 30 ಆಗಸ್ಟ್ 2026 ಭಾನುವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಿತು.
ಇದರ ಉದ್ಘಾಟನೆಯನ್ನು ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಸಚ್ಚಿದಾನಂದ ನಾಯಕ್ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಗಣೇಶ್ ಕುಲಾಲ್ ಕೆಳ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು, ಸಂದೀಪ್ ನಾಯ್ಕ್ ಕಬ್ಯಾಡಿ, ಸಂತೋಷ್ ಕುಮಾರ್ ಸಣ್ಣಕ್ಕಿ ಬೆಟ್ಟು, ರಾಘವೇಂದ್ರ ನಾಯಕ್ ಸಣ್ಣಕ್ಕಿ ಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿ ಬೆಟ್ಟು, ಕೃಷ್ಣ ನಾಯಕ್ ಸಣ್ಣಕ್ಕಿ ಬೆಟ್ಟು, ಅನಂತ ರಾಮ ನಾಯಕ್ ಸಣ್ಣಕ್ಕಿ ಬೆಟ್ಟು, ಸುಧಾಕರ ನಾಯಕ್ ಕಬ್ಯಾಡಿ, ಬಸವರಾಜ್ ನಡಿದಾರೆ, ರವಿರಾಜ್ ಆಚಾರ್ಯ, ಸತೀಶ್ ಶೆಟ್ಟಿಗಾರ್ ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಗಿರೀಶ್ ನಾಯಕ್, ಮಹಿಳಾ ಗೌರವ ಸಲಹೆಗಾರರಾದ ಶ್ರೀಮತಿ ಲತಾ ಸುರೇಶ್, ವೀಣಾ ಜಗದೀಶ್, ಸಭಾಭವನದ ವ್ಯವಸ್ಥಾಪಕರಾದ ಜಯದೀಪ್ ಉಪಸ್ಥಿತರಿದ್ದರು.
ವೇದಿಕೆಯ ಸದಸ್ಯ ಅಶೋಕ್ ಸಣ್ಣಕ್ಕಿ ಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಖ್ಯಾತ ವ್ಯಂಗ್ಯ ಚಿತ್ರಕಾರ ಗೋಪಿ ಹಿರೇಬೆಟ್ಟು ಹಾಗೂ ಗಣಪತಿ ವಿಗ್ರಹ ತಯಾರಕರಾದ ದೇವರಾಜ್ ನಾಯಕ್ ಸಣ್ಣಕ್ಕಿ ಬೆಟ್ಟು ತೀರ್ಪುಗಾರರಾಗಿ ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ 150ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

