ನವದೆಹಲಿ: ನವದೆಹಲಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಉಡುಪಿಯ ಶ್ರೀ ಪೇಜಾವರ ಮಠಾಧೀಶರು ಮಂಗಳವಾರ (ಆ.25) ನವದೆಹಲಿಯ ಆರ್.ಕೆ. ಪುರಂನಲ್ಲಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕೇಂದ್ರೀಯ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಕಾರ್ಯಾಲಯಕ್ಕೆ ಆಗಮಿಸಿದ ಪೂಜ್ಯ ಶ್ರೀಗಳನ್ನು ವಿಶ್ವ ಹಿಂದೂ ಪರಿಷತ್ತಿನ ವಿವಿಧ ರಾಷ್ಟ್ರೀಯ ಹಾಗೂ ಪ್ರಾಂತೀಯ ಪದಾಧಿಕಾರಿಗಳು ಅತ್ಯಂತ ಆದರ ಮತ್ತು ಗೌರವಗಳಿಂದ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶ್ರೀಗಳು ಸಂಘಟನೆಯ ಪ್ರಮುಖರೊಂದಿಗೆ ಪ್ರಚಲಿತ ಸಾಮಾಜಿಕ ಹಾಗೂ ಧಾರ್ಮಿಕ ವಿಷಯಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.
ಭೇಟಿಯ ಅಂಗವಾಗಿ ಆವರಣದಲ್ಲಿರುವ ಗೋಶಾಲೆಗೆ ಭೇಟಿ ನೀಡಿದ ಶ್ರೀಗಳು, ವಿಶೇಷ ಗೋಪೂಜೆ ನೆರವೇರಿಸಿದರು. ತದನಂತರ ಅಲ್ಲಿನ ಸಂಕಟಮೋಚನ ಹನುಮಂತನ ವಿಗ್ರಹಕ್ಕೆ ಪುಷ್ಪಾರ್ಚನೆಗೈದು ಪ್ರಾರ್ಥಿಸಿದರು.
ಬಳಿಕ ನಡೆದ ಧರ್ಮಸಭೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಹಾಗೂ ಭಕ್ತಾದಿಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಶ್ರೀಗಳು, ಧರ್ಮ ರಕ್ಷಣೆ, ನೈತಿಕ ಮೌಲ್ಯಗಳ ಪಾಲನೆ ಮತ್ತು ಸಮಾಜ ಸೇವೆಯ ಮಹತ್ವವನ್ನು ಸಾರುವ ಅನುಗ್ರಹ ಸಂದೇಶ ನೀಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

