ಎಷ್ಟೇ ಸವಾಲುಗಳು ಬಂದರೂ ಸಂಘಟಿರಾಗಿರಿ: ಶ್ರೀ ವಿಶ್ವಪ್ರಸನ್ನ ತೀರ್ಥರ ಕರೆ
ನವದೆಹಲಿ: ಭಾನುವಾರ ನವದೆಹಲಿಯ ರೋಹಿಣಿ ಕ್ಷೇತ್ರದ ಸೆಕ್ಟರ್ 4 ರಲ್ಲಿ ಮುನ್ನೂರಕ್ಕೂ ಅಧಿಕ ಮಂದಿ ವಾಸಿಸುವ ದಲಿತರ ಬಡಾವಣೆಯಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರನ್ನತೀರ್ಥರು ಆಗಮಿಸಿದ್ದಕ್ಕಾಗಿ ಸಮಸ್ತರೂ ಭಾವುಕರಾಗಿದ್ದರು. ಶ್ರೀಗಳನ್ನು ಹೂವಿನ ಮಳೆಗರೆದು ಬಡಾವಣೆಯ ರಸ್ತೆಗಳಲ್ಲಿ ರಂಗೋಲಿಯಿಂದ ಅಲಂಕರಿಸಿ ಭಕ್ತಿಯಿಂದ ಸ್ವಾಗತಿಸಿದ ಪರಿ ಅಪೂರ್ವವಾಗಿತ್ತು.
ವಿಶ್ವಹಿಂದು ಪರಿಷತ್ ಮತ್ತು ಸೇವಾಭಾರತಿಯ ಸಹಯೋಗದಲ್ಲಿ ತಮ್ಮ 39 ಚಾತುರ್ಮಾಸ್ಯ ವ್ರತದ ಅಂಗವಾಗಿ ಈ ಬಡಾವಣೆ ಭೇಟಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಮೂರು ಭಾನುವಾರಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.
ಶ್ರೀರಾಮ ಮಂತ್ರದ ಜಯಘೋಷದೊಂದಿಗೆ ನೂರಾರು ಮಂದಿಯೊಂದಿಗೆ ಶ್ರೀಗಳು ಬಡಾವಣೆಯಲ್ಕಿ ಸಂಚರಿಸಿದರು.
ಆರಂಭದಲ್ಲಿ 5 ಮನೆಗಳಿಗೆ ತೆರಳಿ ಶ್ರೀ ಮಠದ ವತಿಯಿಂದಲೇ ಒದಗಿಸಿದ ಶ್ರೀರಾಮಹಾಗೂ ಉಡುಪಿ ಕೃಷ್ಣನ ಫೋಟೋಗಳನ್ನಿಟ್ಡು ಸಣ್ಣ ದೀಪಗಳನ್ನು ಬೆಳಗಿದರು. ಮನೆಮಂದಿಯಂತೂ ಶ್ರೀಗಳ ಕಾಲಿಗೆ ನೀರೆರೆದು ಆರತಿ ಬೆಳಗಿ ಮಾಲಾರ್ಪಣೆಗೈದು ಭಕ್ತಿಯಿಂದ ಬರಮಾಡಿಕೊಂಡರು.
ಬಳಿಕ ಮನೆಯ ಪ್ರತಿಯೊಬ್ವರ ಹೆಸರು ಉದ್ಯೋಗ ಶಿಕ್ಷಣ ಇತ್ಯಾದಿಗಳನ್ನು ಕೇಳಿ, ಉಭಯಕುಸೋಪರಿ ನಡೆಸಿದರು. ಮನೆಮಂದಿಗೆ ಹತ್ತು ಬಾರಿ ರಾಮಮಂತ್ರವನ್ನು ಉಪದೇಶಿಸಿ, ಪ್ರಸಾದ ನೀಡಿ ಆಶೀರ್ವದಿಸಿದರು. ನಿತ್ಯ ರಾಮ ಕೃಷ್ಣರ ಮಂತ್ರ ಜಪಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಮಡಿದ್ದ ಸ್ಥಳೀಯ ಶಾಸಕ ಕುಲವಂತ ರಾಣಾ ಅವರಲ್ಲಿ ಬಡಾವಣೆಯ ಸ್ವಚ್ಛತೆ, ಮೂಲಭೂತ ಸೌಕರ್ಯಗಳ ನವೀಕರಣ ತುಂಬ ಹಳೆಯದಾಗಿರುವ ಮನೆಗಳನ್ನು ಕಾರ್ಪೊರೇಟ್ ಕಂಪೆನಿಗಳ ಸಹಾಯವನ್ನಾದರೂ ಪಡೆದು ದುರಸ್ತಿಗೊಳಿಸಿಕೊಡುವಂತೆ ಸೂಚಿಸಿದರು.
ಸ್ಥಳೀಯ ವಿಹಿಂಪ ಮತ್ತು ಸೇವಾಭಾರತಿಯ ಮುಖಂಡರು ಕಾರ್ಯಕರ್ತರು ವ್ಯವಸ್ಥೆಯಲ್ಲಿ ಸಹಕರಿಸಿದರು. ಮಠದ ವತಿಯಿಂದ ಎಲ್ಲರಿಗೂ ರಾಮ- ಕೃಷ್ಣರ ಫೋಟೋ, ಸಿಹಿತಿಂಡಿಯುಳ್ಳ ಪ್ರಸಾದದ ಕಿಟ್ ಅನ್ನು ಸ್ವಾಮೀಜಿಯವರು ವಿತರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

