ಪುತ್ತೂರು: ಸುದಾನ ಶಾಲೆಯಲ್ಲಿ ನಗರ ವಲಯ ಮಟ್ಟದ 14 ರ ವಯೋಮಾನದ ವಾಲಿಬಾಲ್ ಪಂದ್ಯಾಟ

Upayuktha
0


ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸುದಾನ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ 14 ರ ವಯೋಮಾನದ ಪುತ್ತೂರು ನಗರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟವು ಆಗಸ್ಟ್ 29 ರಂದು ಸುದಾನ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ವೈಭವದಿಂದ ನಡೆಯಿತು. ಪಂದ್ಯಾಟವನ್ನು ಸುದಾನ ಶಕ್ತಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿತ್ತು.


ತಾಲೂಕು ಪರಿವೀಕ್ಷಣಾಧಿಕಾರಿ ಸಿಲ್ವಿಯಾ ಅವರು ವಾಲಿಬಾಲ್ ಸಹಿತವಾದ ರಿಬ್ಬನ್ ಕತ್ತರಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಕೃಷ್ಣಯ್ಯ, ಸಹ ನೋಡಲ್ ಅಧಿಕಾರಿ ಪ್ರಮೀಳಾ, ಶಾಲಾ ಮುಖ್ಯೋಪಾಧ್ಯಾಯನಿ ಶೋಭಾ ನಾಗರಾಜ್, ಆಡಳಿತ ಅಧಿಕಾರಿ ಸುಶಾಂತ್ ಹಾರ್ವಿನ್, ಕೋಶಾಧಿಕಾರಿ ಆಸ್ಕರ್ ಆನಂದ್ ಹಾಗೂ ಸುದಾನ ಶಕ್ತಿ ಸ್ಪೋರ್ಟ್ಸ್ ಕ್ಲಬ್‌ನ ಸಂಯೋಜಿಕಿ ಗಾಯತ್ರಿ ಕೆ ಉಪಸ್ಥಿತರಿದ್ದರು.


ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಫಲಕಗಳನ್ನು ಪ್ರಾಯೋಜಿಸಿದ ಕ.ರಾ.ರ.ಸಾ.ನಿ ಯ ಶಿಲ್ಪ ರೈ ಅವರು ಮುಖ್ಯ ಅಭ್ಯಾಗತರಾಗಿ ಪಾಲ್ಗೊಂಡು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.


ಪಂದ್ಯಾಟದ ಫಲಿತಾಂಶ:


ಬಾಲಕರ ವಿಭಾಗ:

ಪ್ರಥಮ: ಬೆಥನಿ ಆಂಗ್ಲ ಮಾಧ್ಯಮ ಶಾಲೆ

ದ್ವಿತೀಯ: ಸುದಾನ ವಸತಿಯುತ ಶಾಲೆ


ಬಾಲಕಿಯರ ವಿಭಾಗ:

ಪ್ರಥಮ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಡಿಪ್ಪಾಡಿ

ದ್ವಿತೀಯ: ಸೈಂಟ್ ವಿಕ್ಟರ್ಸ್ ಆಂಗ್ಲ ಮಾಧ್ಯಮ ಶಾಲೆ


ಸುದಾನ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೀಲಾವತಿ, ಪುಷ್ಪರಾಜ್, ನವೀನ್ ಹಾಗೂ ಜೀವಿತಾ ಎನ್.ಕೆ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top