ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ- ಮೌಲ್ಯಮಾಪನ ಅಧ್ಯಯನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

Upayuktha
0


ಬೆಳಗಾವಿ:
ನೈಋತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು) ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ (SC/ST Prevention of Atrocities Act) ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾಗಿರುವ ಮೌಲ್ಯಮಾಪನ ಅಧ್ಯಯನದ ಅಂಗವಾಗಿ, ಬೆಳಗಾವಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಅವರ ನೇತೃತ್ವದಲ್ಲಿ ಸಂತ್ರಸ್ತರೊಂದಿಗೆ ವಿಶೇಷ ಗುಂಪು ಚರ್ಚೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

​ಈ ಸಭೆಯಲ್ಲಿ ಕಾಯಿದೆಯ ಪರಿಣಾಮಕಾರಿತ್ವ, ಸಂತ್ರಸ್ತರಿಗೆ ಲಭಿಸುತ್ತಿರುವ ಸೌಲಭ್ಯಗಳು ಹಾಗೂ ಕಾನೂನು ನೆರವಿನ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.


​ಗುಂಪು ಚರ್ಚೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಚನ್ನಯ್ಯನವರ್, ಪತ್ರಾಂಕಿತ ವ್ಯವಸ್ಥಾಪಕ ಎಂ.ಬಿ. ಹೊಸಮನಿ, ಡಿಸಿಆರ್‌ಇ (DCIR) ಪೊಲೀಸ್ ಇಲಾಖೆಯ ಅಧಿಕಾರಿ ಶ್ರೀಮತಿ ರಂಜಿತ ಗಿಲ್ ಹಾಗೂ ವಕೀಲರಾದ ಎ.ಡಿ. ಕೋಳಿ ಅವರು ಭಾಗವಹಿಸಿ, ಕಾಯಿದೆಯ ವಿವಿಧ ಆಯಾಮಗಳ ಕುರಿತು ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು ಮತ್ತು ಅವರ ಸಮಸ್ಯೆಗಳನ್ನು ಆಲಿಸಿದರು.


​ಕಾರ್ಯಕ್ರಮದಲ್ಲಿ ನೈರುತ್ಯ ಆರ್ಟ ಮೀಡಿಯಾ ಸಂಸ್ಥೆಯ ಬೆಳಗಾವಿ ಪ್ರತಿನಿಧಿ ವೈಶಾಲಿ (ಗೀತಾ) ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯಾದ ರಾಜಶೇಖರ್ ಲಟ್ಟಿ, ಮೋಹನ್ ದುಗಾಡೆ, ಪ್ರಜ್ವಲ್ ಕೋಲಕರ ಹಾಗೂ ದೌರ್ಜನ್ಯ ಕಾಯಿದೆಯ ಸಂತ್ರಸ್ತರು ಉಪಸ್ಥಿತರಿದ್ದು ಸಭೆಯ ಯಶಸ್ಸಿಗೆ ಸಹಕರಿಸಿದರು.


- ಮಹೇಶ್ ಶರ್ಮಾ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top