ಮಂಗಳೂರು: ಆಗಸ್ಟ್ 15 ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಅಗಸ್ಟ್ 15ರಂದು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ವಿದ್ಯಾರ್ಥಿ ಕಲ್ಯಾಣ ಮಂಡಳಿಯವತಿಯಿಂದ “ಯುವ ಶಕ್ತಿ– ವಿಕಸಿತ ಭಾರತ@2047ರ ಪಯಣಕ್ಕೆ ಮುನ್ನಡೆ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ಗಣ್ಯ ಅತಿಥಿಗಳ ಆಗಮನದೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಬ್ ಮೇಜರ್ ಗೌರವಾನ್ವಿತ ಲೆಫ್ಟಿನೆಂಟ್ ಪೂವಪ್ಪ ಪೂಜಾರಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಗೌರವಕ್ಕೆ ನಮನ ಸಲ್ಲಿಸಿದರು. ನಂತರ ಗಣ್ಯರು ದೇಶದ ಮಹಾನ್ ನಾಯಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಪುಷ್ಪನಮನ ಸಲ್ಲಿಸಲಾಯಿತು. ನಂತರ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ತಮ್ಮ ಸುದೀರ್ಘ ಸೇನಾ ಸೇವೆಯ ಅನುಭವವನ್ನು ಹಂಚಿಕೊಂಡು ದೇಶ ಪ್ರೇಮ, ಶಿಸ್ತು, ಕರ್ತವ್ಯ ನಿಷ್ಠೆ ಮತ್ತು ದೇಶದ ಮೇಲಿನ ಜವಾಬ್ದಾರಿ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಅವರು ಸ್ವಾತಂತ್ರ್ಯವೆಂಬುದು ಕೇವಲ ಸಂಭ್ರಮಿಸುವ ದಿನವಲ್ಲ; ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನದ್ದಾಗಿದೆ ಎಂಬ ಸಂದೇಶವನ್ನು ನೀಡಿದರು. ಯುವಜನತೆ ದೇಶದ ಭವಿಷ್ಯ ವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಶಿಸ್ತು, ಪ್ರಾಮಾಣಿಕತೆ, ದೇಶಭಕ್ತಿ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅವರ ಮಾತುಗಳು ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ರಾಷ್ಟ್ರಸೇವೆಯ ಮನೋಭಾವವನ್ನು ಮೂಡಿಸುವಂತಿದ್ದವು. ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅವರು ರಾಷ್ಟ್ರೀಯ ಪ್ರತಿಜ್ಞೆಯನ್ನು ಬೋಧಿಸಿದರು. ವಿದ್ಯಾರ್ಥಿಗಳು ದೇಶದ ಪ್ರಜೆಗಳಾಗಿ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಅವರು ಕರೆ ನೀಡಿದರು. ಬಳಿಕ ಎಸ್ ಸಿ ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಯು.ಕೆ. ಖಾಲಿದ್ ಅವರು ಅಧ್ಯಕ್ಷೀಯ ಭಾಷಣದಲ್ಲಿ ವಿಕಸಿತ ಭಾರತ@2047” ಕನಸನ್ನು ನನಸಾಗಿಸುವಲ್ಲಿ ಯುವಕರ ಕೊಡುಗೆ ಮಹತ್ವದ್ದಾಗಿದೆ ಎಂದು ತಿಳಿಸಿದರು.
ದೇಶದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಂತರ ಅತಿಥಿಗೆ ಅವರ ಸೇವೆಯನ್ನು ಗುರುತಿಸಿ ಗೌರವದ ಅಭಿನಂದನೆಯನ್ನು ವೇದಿಕೆಯಲ್ಲಿರುವ ಗಣ್ಯರು ನೆರವೇರಿಸಿದರು. ಅತಿಥಿಯ ಪರಿಚಯವನ್ನು ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರ ಶೆಟ್ಟಿ ನೆರವೇರಿಸಿದರು. ಬಳಿಕ ಇಂಗ್ಲಿಷ್ ಮತ್ತು ಹಿಂದಿ ವಿಭಾಗದ ಉಪನ್ಯಾಸಕರಾದ ಮಂಜುಶ್ರೀ ಹಾಗೂ ಡಾ. ವಂದನಾ ಅವರು ದೇಶಭಕ್ತಿ ಗೀತೆಯನ್ನು ಪ್ರಸ್ತುತಪಡಿಸಿದರು. ಎಸ್ ಸಿ ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಾರಾಮ್ ರಾವ್ ಟಿ, ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಅಡ್ಮಿಷನ್ ಅಧಿಕಾರಿ ಯಶ್ವಿನ್, ಪರೀಕ್ಷೆ 24×7 ಸಂಸ್ಥೆಯ ಸಿ ಇ ಒ ಆಂಡೋ ಪಾಲ್, ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕರಾದ ತಿಲಕ್ ಗೌಡ, ಹಾಗೂ ಮಧುಮತಿ ಜೆ., ರಾಜ್, ಎಸ್ ಸಿ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಉಪಾಧ್ಯಕ್ಷೆ ಶ್ರೇಯ ಇವರೆಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಅಧ್ಯಕ್ಷೆ ಸಾನ್ವಿ ಎಸ್. ಅವರು ಸ್ವಾಗತ ಭಾಷಣ ಮಾಡಿದರು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಶ್ರಾವ್ಯ ಎಸ್. ಅವರು ವಂದನಾರ್ಪಣೆ ಸಲ್ಲಿಸಿದರು.
ನಿರೂಪಣೆಯನ್ನು ಇಂಟೀರಿಯ ಡಿಸೈನ್ ವಿಭಾಗದ ಉಪನ್ಯಾಸಕಿ ಫಾತಿಮತುಲ್ ಅಜ್ಮಿಯಾ ಅವರು ಸಮರ್ಥವಾಗಿ ಕಾರ್ಯಕ್ರಮ ನಿರೂಪಿಸಿದರು. ಯುವಜನತೆಯಲ್ಲಿ ದೇಶಪ್ರೇಮ, ಕರ್ತವ್ಯಪ್ರಜ್ಞೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಬೆಳೆಸುವ ಸಂದೇಶದೊಂದಿಗೆ 80ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


