ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆ (ಡಿ.ಎಡ್), ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಮತ್ತು ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರೀ ಧ. ಮಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ದ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿ ಮತ್ತು ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು. ಬಳಿಕ ಮಾತನಾಡುತ್ತಾ ಭಾರತ ದೇಶವು ಬ್ರಿಟೀಷರ ಆಳ್ವಿಕೆಯಿಂದ ಮುಕ್ತವಾದ ದಿನ. ನಮ್ಮ ಸ್ವತಂತ್ರ ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ ನಮಗೆಲ್ಲರಿಗೂ ಸ್ಫೂರ್ತಿಯಾದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಮತ್ತು ರಾಷ್ಟ್ರದ ಏಕತೆಯನ್ನು ಕಾಪಾಡಲು ಪ್ರತಿಜ್ಞೆ ಮಾಡುವ ಪವಿತ್ರ ದಿನವಿದು. ನಾವೆಲ್ಲರೂ ದೇಶದ ಪ್ರಗತಿಗೆ ಶ್ರಮಿಸಿ ಸಂವಿಧಾನವನ್ನು ಗೌರವಿಸಿ ರಾಷ್ಟ್ರದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು. ನಮ್ಮ ದೇಶ ಯುವಕರ ದೇಶ, ಇಡೀ ಜಗತ್ತು ನಮ್ಮ ದೇಶದ ಕಡೆ ತಿರುಗಿ ನೋಡಬೇಕಾದರೆ ಯುವಕರ ಸೃಜನಶೀಲತೆ ಕಾರ್ಯಕ್ಷಮತೆ, ವ್ಯಕ್ತಿತ್ವ ಉತ್ತಮವಾಗಿರಬೇಕು ಹಾಗೂ ಗಾಂಧೀಜಿಯವರ ಆಶಯದಂತೆ ಗ್ರಾಮ ಸ್ವರಾಜ್ ಆಗಬೇಕೆಂದು ತಿಳಿಸಿದರು.
ನಮ್ಮ ದೇಶವು ವಿಕಸಿತ ಭಾರತದೊಂದಿಗೆ ಜಗತ್ತು ಗುರುತಿಸುವಂತಾಗಬೇಕು. ನೀವೆಲ್ಲರೂ ನಿಮ್ಮ ತಂದೆ ತಾಯಿ, ನಿಮಗೆ ಶಿಕ್ಷಣ ನೀಡಿದ ಸಂಸ್ಠೆ ಮತ್ತು ನಿಮ್ಮ ಬದುಕನ್ನು ರೂಪಿಸಿದ ಗ್ರಾಮಕ್ಕೆ ಹೆಸರು ತನ್ನಿರಿ ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಡಿ.ಎಡ್. ಮತ್ತು ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ, ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಮತ್ತು ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಶಿಕ್ಷಣಾರ್ಥಿ ಎ ಎಸ್ ಪೂಜಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

