ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿವೇತನ, ಸನ್ಮಾನ ಮತ್ತು ದೇಣಿಗೆ ವಿತರಣೆ

Upayuktha
0


ಉಜಿರೆ: ವಿದ್ಯೆ ಮತ್ತು ಮಾನವೀಯ ಮೌಲ್ಯಗಳಿಂದ ಸುಸಂಸ್ಕೃತ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಾವೂರದ ಆರೋಗ್ಯ ಕ್ಲಿನಿಕ್ ನ  ಡಾ. ಪ್ರದೀಪ್ ಆಟಿಕುಕ್ಕೆ ಹೇಳಿದರು.


ಅವರು ಮಂಗಳವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಆಯೋಜಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿ ಮಾತನಾಡಿದರು.


ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆ ಮಾಡಿ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿವೆ. ಪಠ್ಯೇತರ ಚಟುವಟಿಕೆಗಳು ಜೀವನ ಶಿಕ್ಷಣವನ್ನು ನೀಡುತ್ತವೆ ಎಂದರು.


ಶುಭಾಶಂಸನೆ ಮಾಡಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸೇವೆ, ಸಾಧನೆ ಮಾಡುತ್ತಿರುವ ಬಗ್ಯೆ ಕೃತಜ್ಞತೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.


ಹಿರಿಯ ವಿದ್ಯಾರ್ಥಿಗಳ ಸನ್ಮಾನ: ವೈದ್ಯರುಗಳಾಗಿ ವಿವಿಧ ಊರುಗಳಲ್ಲಿ ಸೇವೆ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಡಾ. ಪ್ರಕಾಶ್, ಉಜಿರೆ, ಡಾ. ರಾಜಾರಾಮ, ಉಪ್ಪಿನಂಗಡಿ, ಡಾ. ಎಂ.ಎಂ. ದಯಾಕರ, ಡಾ. ಸದಾನಂದ ಪೂಜಾರಿ, ಮಂಗಳೂರು, ಡಾ. ಶ್ರೀಹರಿ, ಗುರುವಾಯನಕೆರೆ, ಡಾ. ಪ್ರದೀಪ್ ಆಟಿಕುಕ್ಕೆ, ನಾವೂರು, ಡಾ. ಶಶಿಕಾಂತ್ ಡೋಂಗ್ರೆ, ಬೆಳ್ತಂಗಡಿ, ಡಾ. ರಂಜನ್ ಕುಮಾರ್, ಉಜಿರೆ, ಡಾ, ರೇಷ್ಮಾ, ಮೂಡಬಿದ್ರೆ ಮತ್ತು ಡಾ. ಶ್ರೀಹರ್ಷ, ಉಜಿರೆ ಅವರನ್ನು ಸನ್ಮಾನಿಸಲಾಯಿತು.


ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಇಪ್ಪತ್ತು ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ. ನಂತೆ ಒಂದು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು.


ಮಧ್ಯಾಹ್ನ ಭೋಜನ ವ್ಯವಸ್ಥೆಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ದೇಣಿಗೆ ನೀಡಿದರು.

ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಸ್ವಾಗತಿಸಿದರು. ವಕೀಲ ಬಿ.ಕೆ. ಧನಂಜಯ ರಾವ್ ಧನ್ಯವಾದವಿತ್ತರು.

ಉಪನ್ಯಾಸಕರುಗಳಾದ ದಿವಾ ಕೊಕ್ಕಡ ಮತ್ತು ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top