ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Upayuktha
0

ಉಜಿರೆ; ಆ 12 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಇತಿಹಾಸ  ವಿಭಾಗದ ವತಿಯಿಂದ ಆಗಸ್ಟ್ 12 ರಂದು ''ತುಳುವೆರೆ ಆಟಿ''  ವಿಶೇಷ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಐ.ಟಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ ರವೀಶ್ ಪಡುಮಲೆ ಮಾತನಾಡಿದರು,  ಪರಶುರಾಮ ಸೃಷ್ಟಿಯ ಈ ತುಳುನಾಡಿನಲ್ಲಿ ಆಟಿಯ ಆಚಾರಣೆ  ವಿಶಿಷ್ಟ ಹಿನ್ನೆಲೆಯನ್ನು ಹೊಂದಿದೆ. 


ಹಿರಿಯರ ಕಾಲದಲ್ಲಿ ಆಟಿ ತಿಂಗಳು ಎಂದರೆ ಅದು ಕಷ್ಟದ ಸಮಯ. ಆದರೆ ಈಗ ಕಾಲ ಬದಲಾಗಿದೆ , ಈಗ ಎಲ್ಲೆಲ್ಲಿಯೋ ಆಟಿದ ಕೂಟ, ಕೆಸರಡೂಂಜಿ ದಿನ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ ಆದರೆ ಮುಖ್ಯವಾಗಿ ನಾವು ನಮ್ಮ ಹಿರಿಯರ ಕಷ್ಟ ಅವರ ಬದುಕು ಆಚರಣೆ ಸಂಸ್ಕೃತಿಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಎಸ್‌. ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ವಿಶ್ವನಾಥ್ ಪಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ವಿಭಾಗ ಮುಖ್ಯಸ್ಥ ಡಾ. ಸನ್ಮತಿ ಕುಮಾರ್ ಸ್ವಾಗತಿಸಿ, ತೃತೀಯ ವರ್ಷದ ವಿದ್ಯಾರ್ಥಿಗಳಾದ ಸುಶೀರ ನಿರೂಪಿಸಿ, ನಿಶ್ಮಿತಾ ವಂದಿಸಿದರು.


 ಉಪನ್ಯಾಸಕಿ ಡಾ.ಸಾಜಿದ, ವಿದ್ಯಾರ್ಥಿ ಪ್ರತಿನಿಧಿಗಳಾದ ಕಿರಣ್ಮಯಿ, ಮಿಥುನ್ ಮತ್ತು ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ತಿಂಡಿಗಳನ್ನು ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top