ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ: ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Upayuktha
0


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ  ಆಯೋಜನೆಗೊಳ್ಳಲಿರುವ ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (Faculty Development Programme – FDP) ದ ಆಮಂತ್ರಣ ಪತ್ರಿಕೆ ಹಾಗು ಕಾರ್ಯಾಗಾರದ ಉದ್ದೇಶ ಮತ್ತು ವಿವರಣೆಯನ್ನು ಹೊಂದಿರುವ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. 


ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಹಾಗು ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್ ಕಾಕತ್ಕಾರ್ , ಕಾಲೇಜಿನ ಪ್ರಾಚಾರ್ಯರಾದ ಡಾ. ಸಂದೀಪ್ ಆರ್., ಕಾಲೇಜಿನ ಪ್ರಬಂಧಕರಾದ ರಾಜವರ್ಮ, ಕಾರ್ಯಾಗಾರದ ಸಂಯೋಜಕರಾದ ಡಾ. ರಜತ ಪಿ. ಶೆಟ್ಟಿ ಹಾಗೂ ಡಾ. ನವೀನ್ ಕುಮಾರ್ ಕಾರ್ಯಾಗಾರ ಆಯೋಜನಾ ಸಮಿತಿಯ ಕಾರ್ಯದರ್ಶಿಗಳಾದ ಡಾ. ವಿದ್ಯಾ ಕೆ, ಡಾ. ನಿತ್ಯಾನಂದ ಬಿ. ಡಾ. ಗಿರೀಶ್ ಕುಮಾರ್ ಸೇರಿದಂತೆ ಡಾ. ರವೀಶ್ ಪಡುಮಲೆ, ಡಾ. ತ್ಯಾಗರಾಜ್ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು. 


ರಾಷ್ಟ್ರ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಗಾರವು ಇದೇ ಬರುವ ಆಗಸ್ಟ್ 18 ರಿಂದ 22ರವರೆಗೆ ಐದು ದಿನಗಳ  ವರೆಗೆ ಕಾಲೇಜಿನಲ್ಲಿ ನಡೆಯಲಿದೆ. ಮುಂದಿನ ತಲೆಮಾರಿನ ಶೈಕ್ಷಣಿಕ ಕ್ಷೇತ್ರದ  ಕೃತಕ ಬುದ್ಧಿಮತ್ತೆ (AI) ಆಧಾರಿತ ಬೋಧನೆ, ಸಂಶೋಧನೆ ಮತ್ತು ಆವಿಷ್ಕಾರ ವಿಷಯದಡಿ ಕಾರ್ಯಾಗಾರವು ಸಾಗಿಬರಲಿದೆ. ಕಾರ್ಯಾಗಾರದಲ್ಲಿ ರಾಷ್ಟ್ರೀಯ ಮಟ್ಟದ ವಿವಿಧ ವಿಷಯಗಳ ತಜ್ಞರು ಪಾಲ್ಗೊಳ್ಳಲಿದ್ದಾರೆ. 


ಈ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವು ಕೃತಕ ಬುದ್ಧಿಮತ್ತೆ (AI) ಆಧಾರಿತ ಬೋಧನೆ, ಸಂಶೋಧನೆ ಹಾಗೂ ಆವಿಷ್ಕಾರಗಳ ಇತ್ತೀಚಿನ ಬೆಳವಣಿಗೆಗಳನ್ನು ಪರಿಚಯಿಸುವುದರ ಜೊತೆಗೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ AI ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಅಧ್ಯಾಪಕರಿಗೆ ಒದಗಿಸುವ ಉದ್ದೇಶವನ್ನು ಹೊಂದಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top