ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಭೌತಶಾಸ್ತ್ರ ವಿಭಾಗವು ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿ, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಎ.ಪಿ. ರಾಧಾಕೃಷ್ಣ ಅವರು ಮಾತನಾಡಿ, ನಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಿಷಯದ ಬಗ್ಗೆಯೂ ಕುತೂಹಲ ಬೆಳೆಸಿಕೊಳ್ಳಬೇಕು. ಇಂತಹ ಕುತೂಹಲವು ಜೀವನದಲ್ಲಿ ನಮ್ಮನ್ನು ಶಾಂತ, ವಿನಮ್ರ ಹಾಗೂ ಏಕಾಗ್ರರನ್ನಾಗಿ ಮಾಡುತ್ತದೆ ಎಂದು ಹೇಳಿ,ವಿದ್ಯಾರ್ಥಿಗಳು ಭೌತಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವO. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಪ್ರಾಚೀನ ಕಾಲದಿಂದ ಇಂದಿನವರೆಗೆ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಮಹತ್ವದ ಪ್ರಗತಿ ಮತ್ತು ಸಾಧನೆಗಳನ್ನು ವಿವರಿಸಿ, ರಾಷ್ಟ್ರದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಸಂಶೋಧನೆಯ ಮಹತ್ವವನ್ನು ಹೇಳಿ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಾಲೇಜಿನ ವಿವಿಧ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಪ್ರೋತ್ಸಾಹಿಸಿ ಕಾರ್ಯಕ್ರಮವನ್ನು ಆಯೋಜಿಸಿದ ಸಿಬ್ಬಂದಿಯನ್ನು ಅಭಿನಂದಿಸಿದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ NSS ಅಧಿಕಾರಿಯಾದ ಡಾ. ಕೆ. ಚಂದ್ರಶೇಖರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜ್ಞಾನ ವಿಭಾಗದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮಾನಸಾ ಮತ್ತು ತಂಡದ ಪ್ರಾರ್ಥನೆ, ರಾಧಿಕಾ ವೈ. ಸ್ವಾಗತಿಸಿ ಸ್ಪೂರ್ತಿ ಸಿ.ಎಸ್. ಅವರು ವಂದನಾರ್ಪಣೆ ಸಲ್ಲಿಸಿದರು. ವಿಂಧ್ಯಶ್ರೀ ರೈ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
