ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯ ವಿದ್ಯಾರ್ಥಿಗಳಾದ ಮಾನ್ವಿ ಡಿ(10ನೇ), ಆದಿತ್ಯ ಸಿದ್ದಾರ್ಥ್ ಭೌಧ್ (7ನೇ) ಮತ್ತು ಅಧಿಕ ಪಕ್ಕಳ (6ನೇ) ಮಂಗಳೂರಿನ ಮಂಗಳ ಈಜುಕೊಳದಲ್ಲಿ ಆಗಸ್ಟ್ 20ರಂದು ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.
100 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, 50 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, 50 ಮೀ ಪ್ರೀ ಸ್ಟೈಲ್ ನಲ್ಲಿ ಕಂಚಿನ ಪದಕ ಪಡೆದಿರುವ ಮಾನ್ವಿ ಡಿ, ಮತ್ತು 50 ಮೀ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ, , 50ಮೀ ಬಟರ್ ಫೈನಲ್ಲಿ ಬೆಳ್ಳಿ, 100 ಮೀ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ ಪದಕವನ್ನು ಪಡೆದಿರುವ ಆದಿತ್ಯ ಸಿದ್ದಾರ್ಥ್ ಭೌಧ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅಧಿಕ ಪಕ್ಕಳ 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕಗಳಿಸಿದ್ದಾರೆ.
ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ್ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


