ತೆಂಕನಿಡಿಯೂರು ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಬೀಚ್ ಕ್ಲೀನಿಂಗ್

Upayuktha
0

ತೆಂಕನಿಡಿಯೂರು: ಶನಿವಾರಂದು ಮಲ್ಪೆ ಕಡಲ ತೀರದಲ್ಲಿ ಸ್ವಚ್ಛತಾ  ಕಾರ್ಯಕ್ರಮವನ್ನು ನಡೆಸಲಾಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ಕಾಲೇಜಿನ ರೋವರ್ ರೇಂಜರ್ಸ್ ವಿದ್ಯಾರ್ಥಿಗಳು ಲೈಫ್ ಗಾರ್ಡ್, ಹೋಮ್ ಗಾರ್ಡ್ ರವರ ಸಂಪೂರ್ಣ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮವು  ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ  ನಿಪುಣ್ ಮತ್ತು ರಾಜ್ಯ ಪುರಸ್ಕಾರ ಪರೀಕ್ಷೆ ಬರೆಯುವ ರೋವರ್, ರೇಂಜರ್ಸ್  ವಿದ್ಯಾರ್ಥಿಗಳು,  ಭಾಗವಹಿಸಿದ್ದರು.  ಕಾಲೇಜಿನ ರೇಂಜರ್ಸ್ ಲೀಡರ್  ಸುಷ್ಮಾ ಟಿ ರವರು ಮಾತನಾಡಿ  - ವಿದ್ಯಾರ್ಥಿಗಳ ಬೀಚ್ ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರಮವಾಗಿರಬಾರದು. ಸ್ವಚ್ಛ ಕಡಲತೀರ – ಆರೋಗ್ಯಕರ ಪರಿಸರ ಎಂಬ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು, ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು ಮತ್ತು ಇತರರಿಗೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ರೋವರ್ಸ್ ಲೀಡರ್ ಮರ್ವಿನ್ ಡಿಸೋಜ ಆಯೋಜಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top