ಸಾಂಪ್ರದಾಯಿಕ ಬೌದ್ಧಿಕ ಆಸ್ತಿ ರಕ್ಷಣೆಯಲ್ಲಿ ಭಾರತೀಯ ಮಹಿಳೆಯರ ಪಾತ್ರ ಅನನ್ಯ: ಪ್ರೊ. ಡಾ. ಟಿ. ರಾಮಕೃಷ್ಣ

Upayuktha
0


ಬೆಂಗಳೂರು: "ಭಾರತೀಯ ಮಹಿಳೆಯರು ಅರಿಶಿನ, ಬೇವು, ನೆಲ್ಲಿ ಹಾಗೂ ತುಳಸಿಗಳಂತಹ ಸಾಂಪ್ರದಾಯಿಕ ಬೌದ್ಧಿಕ ಆಸ್ತಿಗಳನ್ನು ತಲೆಮಾರುಗಳಿಂದ ರಕ್ಷಿಸಿಕೊಂಡು ಬಂದಿದ್ದಾರೆ," ಎಂದು NLSIU ನ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಡಾ. ಟಿ. ರಾಮಕೃಷ್ಣ ಅವರು ಅಭಿಪ್ರಾಯಪಟ್ಟಿದ್ದಾರೆ.


ನಗರದ ಬಿ.ಎಂ.ಎಸ್. ಮಹಿಳಾ ಮಹಾವಿದ್ಯಾಲಯದ ಬಿ.ಎಸ್. ನಾರಾಯಣ್ ಸೆಮಿನಾರ್ ಹಾಲ್‌ನಲ್ಲಿ ಮಂಗಳವಾರ (ಆಗಸ್ಟ್ 25) ಆಯೋಜಿಸಲಾಗಿದ್ದ “ಬೌದ್ಧಿಕ ಆಸ್ತಿ ಹಕ್ಕುಗಳು ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗಳು: ಅವಕಾಶಗಳು, ಸವಾಲುಗಳು ಮತ್ತು ಭವಿಷ್ಯದ ನಿರ್ದೇಶನಗಳು” ವಿಷಯದ ಕುರಿತ ಒಂದು ದಿನದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


ಈ ಕಾರ್ಯಕ್ರಮವನ್ನು ಬಿ.ಎಂ.ಎಸ್. ಮಹಿಳಾ ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಗಳು ಹಾಗೂ ಐಪಿಆರ್ ಕೋಶವು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿತ್ತು.


ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸವಾಲುಗಳು:


ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಮಾತನಾಡಿದ ಡಾ. ರಾಮಕೃಷ್ಣ ಅವರು, "ಇಂದಿನ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಬೌದ್ಧಿಕ ಆಸ್ತಿಗೆ ಸವಾಲೆಸೆಯುತ್ತಿದ್ದರೂ, AI ಎಂದಿಗೂ ಒಬ್ಬ ಮೂಲ ಸಂಶೋಧಕನಾಗಲು ಸಾಧ್ಯವಿಲ್ಲ. ಹಣಗಳಿಕೆಗೆ ಒಳಪಡದ ಪೇಟೆಂಟ್‌ಗಳು ‘ವ್ಯಾಲಿ ಆಫ್ ಡೆತ್’ ನಂತಾಗುತ್ತವೆ. ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮದೇ ಆದ ಸ್ಪಷ್ಟ ಐಪಿ (IP) ನೀತಿಯನ್ನು ರೂಪಿಸಿಕೊಳ್ಳಬೇಕು," ಎಂದು ಕರೆ ನೀಡಿದರು. ಜಾಗತಿಕ ಆರ್ಥಿಕತೆಯಲ್ಲಿ ಭಾರತವು ಪ್ರಸ್ತುತ 38ನೇ ಸ್ಥಾನದಲ್ಲಿದ್ದು, ಬೌದ್ಧಿಕ ಆಸ್ತಿಗೆ ಸಂಬಂಧಿಸಿದಂತೆ 19 ಅಂತರರಾಷ್ಟ್ರೀಯ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದರು.


ಸಂಶೋಧನಾ ಪ್ರಬಂಧಗಳ ಪ್ರಕಟಣೆ:


ಸಮ್ಮೇಳನದ ಭಾಗವಾಗಿ ಆಯೋಜಿಸಲಾಗಿದ್ದ ವಿಭಿನ್ನ ತಾಂತ್ರಿಕ ಅಧಿವೇಶನಗಳಲ್ಲಿ ಐಐಎಸ್ಸಿ (IISc) ಬೆಂಗಳೂರಿನ ಡಾ. ವಿಜಯ್ ಸಿಂಗ್, ಪ್ಯಾರಿಸ್ CNRS ನ ಡಾ. ಸತ್ಯ ಮರಿಯಪ್ಪನ್ ಹಾಗೂ ಕ್ರೈಸ್ಟ್ ವಿಶ್ವವಿದ್ಯಾಲಯದ ಡಾ. ಶಿಲ್ಪಾ ಎಂ. ಎಲ್. ಅವರು ವಿಷಯ ಮಂಡನೆ ಮಾಡಿದರು. ಇದೇ ಸಂದರ್ಭದಲ್ಲಿ ಸಂಶೋಧನಾ ಲೇಖನಗಳ ಅಬ್‌ಸ್ಟ್ರಾಕ್ಟ್ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.


ದೇಶ-ವಿದೇಶಗಳ ಸುಮಾರು 250ಕ್ಕೂ ಹೆಚ್ಚು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮಾದರಿಯಲ್ಲಿ ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ಅತ್ಯುತ್ತಮ ಮೌಖಿಕ ಹಾಗೂ ಪೋಸ್ಟರ್ ಪ್ರಸ್ತುತಪಡಿಸಿದ ಸಂಶೋಧಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಬಿ.ಎಂ.ಎಸ್. ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘುಕುಮಾರ ಎನ್. ಅವರು ಎಲ್ಲರನ್ನು ಸ್ವಾಗತಿಸಿದರು. ಸಮಾರೋಪ ಸಮಾರಂಭದಲ್ಲಿ ಬಿಎಂಎಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಲ್. ರವಿಕುಮಾರ್ ಅವರು ಸಮಾರೋಪ ನುಡಿಗಳನ್ನಾಡಿದರು.


ಬಿ.ಎಂ.ಎಸ್. ಶಿಕ್ಷಣ ದತ್ತಿಯ ಸದಸ್ಯ ಕಾರ್ಯದರ್ಶಿ ಡಾ. ಬಿ.ಎಸ್. ರಾಗಿಣಿ ನಾರಾಯಣ್ ಅವರ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಶ್ರೀ ಅವಿರಾಮ್ ಶರ್ಮ, ನಿರ್ದೇಶಕ ವಿಂಗ್ ಕಮಾಂಡರ್ ರಾಘವನ್ ಆರ್. ಎ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ಪಿ. ಹೆಚ್, ಉಪಪ್ರಾಂಶುಪಾಲರಾದ ಶ್ರೀಮತಿ ಸುನೀತ ಕೆ. ಹಾಗೂ ಶಿಕ್ಷಣ ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top