ತ್ಯಾಗರಾಜ ನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನಾ ಮಹೋತ್ಸವ

Upayuktha
0


ಬೆಂಗಳೂರು: ಬಸವನಗುಡಿಯ ತ್ಯಾಗರಾಜ ನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಆರಂಭವಾಯಿತು.


ಮಂತ್ರಾಲಯ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಶ್ರೀಪಾದರ ಪರಿಪೂರ್ಣ ಆರ್ಶೀವಾದದಿಂದ ಶುಭಾರಂಭವಾದ 355ನೇ ಆರಾಧನಾ ಮಹೋತ್ಸವಕ್ಕೆ ತಂಬಿಹಳ್ಳಿಯ ಶ್ರೀಮನ್ ಮಾಧವ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಧನ, ಧಾನ್ಯ, ಗೋವಿನ ಪೂಜೆ ಸಲ್ಲಿಸಿ ವಿಧ್ಯುಕ್ತವಾಗಿ ಚಾಲನೆ ನೀಡಿದರು.


ನೆರೆದ ನೂರಾರು ಭಕ್ತರ ಸಮ್ಮುಖದಲ್ಲಿ ನವೀಕೃತ ತ್ಯಾಗರಾಜರ ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ಆರಾಧನಾ ಮಹೋತ್ಸವ ನಡೆಯಲಿದೆ.


ವಿಧಾನ ಸಭೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್, ಲೋಕಸಭಾ ಸದಸ್ಯರಾದ ಡಾ. ಸಿ ಮಂಜುನಾಥ್, ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ, ಟಿ ಎ ಶರವಣ, ಬಿಜೆಪಿ ಮುಖಂಡ ಸಂಗಾತಿ ವೆಂಕಟೇಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ದಿಲೀಪ್ ಕುಮಾರ್, ವಿಶ್ವ ಮಧ್ವಮತ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ವೆಂಕೋಬ ರಾವ್ ಸೇರಿದಂತೆ ಹಲವು ಗಣ್ಯರು ಆರಾಧನಾ ಮಹೋತ್ಸವಕ್ಕೆ ಆಗಮಿಸಿ ರಾಯರ ಕೃಪೆಗೆ ಪಾತ್ರರಾಗುತ್ತಾರೆ. ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಠದ ವಕ್ತಾರರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top