ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲದ ಉಡುಪಿ ಕಾಲೇಜ್ ಆಫ್ ಪ್ರೊಫೆಷನಲ್ ಸ್ಟಡೀಸ್‌ನ ಕನ್ನಡ ಉಪನ್ಯಾಸಕಿ ಹಾಗೂ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀಮತಿ ಅರ್ಪಿತಾ ಶೆಟ್ಟಿ ಅವರು ಜ್ಯೋತಿ ಬೆಳಗಿಸುವ ಮೂಲಕ ಅಧಿಕೃತವಾಗಿ ಘಟಕಗಳನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಸೇವೆ ಮತ್ತು ಶಿಸ್ತಿನ ಮಹತ್ವವನ್ನು ಒತ್ತಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್.ನಾಯಕ್ ಅವರು ವಹಿಸಿದ್ದರು.
ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ವಿದ್ಯಾರ್ಥಿಗಳು ಇಂತಹ ಸೇವಾ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಅವರಲ್ಲಿ ನಾಯಕತ್ವದ ಗುಣಗಳು ಮತ್ತು ಸಾಮಾಜಿಕ ಜವಾಬ್ದಾರಿಗಳು ಬೆಳೆಯುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ಸನತ್ ಕೋಟ್ಯಾನ್, ಯೂತ್ ರೆಡ್ ಕ್ರಾಸ್ ಸಂಯೋಜಕರಾದ ಕುಮಾರಿ ದೀಪಿಕಾ ಕೋಟ್ಯಾನ್, ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸಂಯೋಜಕರಾದ ಶ್ರೀಮತಿ ಅಕ್ಷತಾ ನಾಯಕ್ ಮತ್ತು ಶ್ರೀ ಸ್ಟಾಲಿನ್ ಡ್ಯಾನ್ಸನ್ ಡಿಸೋಜಾ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಕಾಯಕ್ರಮದ ಅಧಿಕಾರಿ ಸನತ್ ಕೋಟ್ಯಾನ್ ಪ್ರಸ್ತಾವಿಕ ನುಡಿಗಳನ್ನು ಆಡಿದರು. ಪ್ರಣತಿ ದ್ವಿತೀಯ ಬಿಸಿಎ ಸ್ವಾಗತಿಸಿ, ಲಾವಣ್ಯ ದ್ವಿತೀಯ ಬಿಕಾಂ ವಂದಿಸಿ , ಸುನಾಗ್ ದ್ವಿತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

