ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು, ಉಜಿರೆಯಲ್ಲಿ “Next-Generation Academia: AI-Enabled Teaching, Research and Innovation” ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ನಾಳೆ, 18 ಆಗಸ್ಟ್ 2026ರಿಂದ ಆರಂಭಗೊಳ್ಳಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಭಾಷಣಕಾರರಾಗಿ ಡಾ. ಕೆ. ಸತ್ಯಮೂರ್ತಿ, ಪ್ರಾಧ್ಯಾಪಕರು ಹಾಗೂ ನಿರ್ದೇಶಕರು (ಸಂಶೋಧನೆ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಧಾರವಾಡ, ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಡಾ. ಸತೀಶ್ಚಂದ್ರ ಎಸ್., ಕಾರ್ಯದರ್ಶಿಗಳು, ಎಸ್‌ಡಿಎಂ ಶೈಕ್ಷಣಿಕ ಸಂಸ್ಥೆಗಳ ಸಂಘ, ಉಜಿರೆ, ಉಪಸ್ಥಿತರಿರುವರು.
ಗೌರವ ಅತಿಥಿಯಾಗಿ ಪೂರನ್ ವರ್ಮಾ, ಸಿಇಒ–ಐಟಿ ಮತ್ತು ಹಾಸ್ಟೆಲ್ ಆಡಳಿತ, ಎಸ್‌ಡಿಎಂ ಶೈಕ್ಷಣಿಕ ಸಂಸ್ಥೆಗಳ ಸಂಘ, ಉಜಿರೆ, ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ಮೂಲ ವಿಜ್ಞಾನ ಮತ್ತು ಗ್ರಂಥಾಲಯ ವಿಭಾಗ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಜಂಟಿಯಾಗಿ ಆಯೋಜಿಸಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

