ಕುಳಾಯಿ ಚಿತ್ರಾಪುರ ಫಿಶರೀಸ್ ಶಾಲೆಯಲ್ಲಿ 80ನೇ ಸ್ವಾತಂತ್ಯ ದಿನಾಚರಣೆ

Upayuktha
0




ಸುರತ್ಕಲ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ,ಲಯನ್ಸ್ ಕ್ಲಬ್ ನವ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ಸಹಭಾಗಿತ್ವದಲ್ಲಿ ಆಚರಿಸಲಾಯಿತು.


ನವ ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲಿಂಗರಾಜು ಧ್ವಜಾರೋಹಣ ನಡೆಸಿದರು. ಪ್ರಧಾನ ಭಾಷಣ ಮಾಡಿದ ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ಅಧ್ಯಕ್ಷ ಕಿರಣ್ ಪ್ರಸಾದ್ ರೈ ಸ್ವಾತಂತ್ರ್ಯ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.


ಚಿತ್ರಾಪುರ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಸಲಾಯಿತು. ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ವತಿಯಿಂದ ಎಲ್.ಕೆ.ಜಿ. ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಿಸಲಾಯಿತು.

 

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮತ್ತು ಲಯನ್ ಸಂಪುಟ ಜಿಲ್ಲಾಧ್ಯಕ್ಷ ಮನೋಜ್ ಕುಮಾರ್ ತಣ್ಣೀರು ಬಾವಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು.




ಹಳೆ ವಿದ್ಯಾರ್ಥಿಸಂಘದ ಅಧ್ಯಕ್ಷ ಮಾಧವ ಸುವರ್ಣ, ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ, ಸದಸ್ಯ ಶ್ರೀನಿವಾಸ ಅಮೀನ್, ಕಾರ್ತಿಕ್ ಚಿತ್ರಾಪುರ, ಪುಷ್ಪಾ ವತಿ ಶ್ರೀನಿವಾಸ ರಾವ್, ಶ್ರೀನಿವಾಸ ರಾವ್,ಲಯನ್ಸ್ ಕ್ಲಬ್ ಕಾರ್ಯದರ್ಶಿ ಸಂತೋಷ, ಕೋಶಾಧಿಕಾರಿ ಲೋಕೇಶ್ ಅಮೀನ್, ಅಬೂಬುಕರ್ ಕುಕ್ಕಾಡಿ, ನೂರ್ ಜಹಾನ್ ಕುಕ್ಕಾಡಿ, ಹರಿ ದೊರೆ ಸ್ವಾಮಿ, ಬಾಲಕೃಷ್ಣ, ಮುರಳೀಧರ್, ರಾಜ್ ಕುಮಾರ್, ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ನ ಕಾರ್ಯದರ್ಶಿ ನವೀನ್ ಇಡ್ಯಾ, ಪವನ್ ಜೆ ವಿ., ಪ್ರಜ್ವಲ್ ಎಂ ದಾಸ್, ಯತೀಶ್ ಪ್ರಶಾಂತ್, ಧನರಾಜ್, ಸುಭೋದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಶಿಕಲಾ ಮತ್ತು ಪದಾಧಿಕಾರಿಗಳು, ಶಿಕ್ಷಕಿಯರು, ಚಿತ್ರಾಪುರ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಲಲಿತ್ ಮತ್ತು ಪದಾಧಿಕಾರಿ ಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ, ನೃತ್ಯ ಗಳು ನಡೆದವು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಸುಕೇಶಿನಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top