ವಾರಣಾಶಿ ಸ್ವಿಮ್ಮಿಂಗ್ ಅಕಾಡೆಮಿ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಉಚಿತ ಈಜು ತರಬೇತಿಗೆ ಚಾಲನೆ

Upayuktha
0


ಅಡ್ಯನಡ್ಕ: ವಾರಣಾಶಿ ಸ್ವಿಮ್ಮಿಂಗ್ ಅಕಾಡೆಮಿ ವತಿಯಿಂದ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ದೀರ್ಘಾವಧಿಯ ಉಚಿತ ಈಜು ತರಬೇತಿ ಯೋಜನೆಯನ್ನು ಆಗಸ್ಟ್ 24ರಂದು ಉದ್ಘಾಟಿಸಲಾಯಿತು.


ಅಂತರರಾಷ್ಟ್ರೀಯ ಈಜು ತರಬೇತುದಾರ ಹಾಗೂ ಫಿನ್‌ಲ್ಯಾಂಡ್ ದೇಶದ ಖ್ಯಾತ ಈಜುಪಟು ಮಟ್ಟಿ ರಾಜಕೈಲಾ ಅವರು ತರಬೇತಿ ಯೋಜನೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ವಾರಣಾಶಿ ಸ್ವಿಮ್ಮಿಂಗ್ ಅಕಾಡೆಮಿಯ ಮುಖ್ಯಸ್ಥರಾದ ಪಾರ್ಥ ವಾರಣಾಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈಜು ತರಬೇತುದಾರರಾದ ವಿಕಾಸ್ ಅವರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಸಲಹೆ-ಸೂಚನೆಗಳನ್ನು ನೀಡಿದರು.


ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್. ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top