ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ

Upayuktha
0

ಪುತ್ತೂರು: ಶ್ರೀದೇವಿ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ.


ಈ ಪಂದ್ಯಾಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಂ  ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅಂತೆಯೇ ಪ್ರಥಮ ಪಿಯುಸಿಯ ಕಲಾವಿಭಾಗದ  ಪ್ರೀತೇಶ್, ವಾಣಿಜ್ಯ ವಿಭಾಗದ ಅಭಯ್ ಎಸ್. ರಾವ್ , ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ ಇವರು ಬೆಳ್ಳಿ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಕ್ಷಯ್ ಬಿ .ಟಿ ಹಾಗೂ ಸಾನ್ವಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top