ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ

Upayuktha
0




ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಸುರತ್ಕಲ್ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ ಜರಗಿತು. ಧ್ವಜಾರೋಹಣವನ್ನು ಸುರತ್ಕಲ್ ಇಲ್ಲಿನ ಉದ್ಯಮಿ ವೈ ರಾಘವೇಂದ್ರ ರಾವ್ ಇವರು ನೆರವೇರಿಸಿ ಸ್ವಾತಂತ್ಸ್ಯೋತ್ಸವದ ಸಂದೇಶ ನೀಡಿದರು.


ಪ್ರಸ್ತಾವನೆಯನ್ನು ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ, ಹಾಗೂ ಶಾಲಾ ಸಂಚಾಲಕ ಸುಧಾಕರ ರಾವ್ ಪೇಜಾವರ್, ನೆರವೇರಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ದಿವಸ್ಪತಿ ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಮಂಗಳೂರಿನ ನಿಕಟ ಪೂರ್ವ ಕುಲಪತಿ ಪ್ರೊಫೆಸರ್ ಡಾಕ್ಟರ್ ಬಿ ಸತೀಶ್ ಕುಮಾರ್ ಭಂಡಾರಿ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೇಣುಕಾ, ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಅಧಿಕಾರಿ ಶ್ರೀಮತಿ ಮೃದುಲಾ ಬಿನು ಇವರೆಲ್ಲರೂ ಉಪಸ್ಥಿತರಿದ್ದು ಶುಭ ಹಾರೈಸಿದರು.


ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಅಂತಿಮವಾಗಿ ಶಾಲಾ ಮಕ್ಕಳಿಂದ ಸ್ವಾತಂತ್ರ‍್ಯದ ಸಂದೇಶ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top