ಪುತ್ತೂರು : ಇಲ್ಲಿನ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ ಇದರ ಆಶ್ರಯದಲ್ಲಿ 45ನೇ ವರ್ಷದ ಮಾನ್ಸೂನ್ ಚೆಸ್ ಪಂದ್ಯಾಟ ಇದೇ ಆಗಸ್ಟ್ ತಿಂಗಳ 18 ,19 ಮತ್ತು 20ರಂದು ನಡೆಯಲಿದೆ. ಈ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.
ಪಂದ್ಯಾಟವು ಸ್ವಿಸ್ ಮಾದರಿಯ ಕ್ಲಾಸಿಕಲ್ ಶೈಲಿಯಲ್ಲಿ( 1 ಗಂಟೆ) ಆರರಿಂದ ಒಂಬತ್ತು ಸುತ್ತುಗಳಲ್ಲಿ ನಡೆಯಲಿದೆ. ಮೊದಲ 10 ಸ್ಥಾನ ಪಡೆದವರಿಗೆ ಬಹುಮಾನ ನೀಡಲಾಗುವುದು.
ಉತ್ತಮ 3 ಜನ ಮಹಿಳಾ ಆಟಗಾರ್ತಿಯರಿಗೆ ಬಹುಮಾನ,ಅಲ್ಲದೆ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್ ( 9480656799) ಇವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಪ್ರೊ. ಶ್ರೀ ಕೃಷ್ಣ ಗಣರಾಜ ಭಟ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

