ವಿವೇಕಾನಂದ ಮಹಾ ವಿದ್ಯಾಲಯದಲ್ಲಿ ಸಂಭ್ರಮದ ಆಟಿ ಕೂಟ

Upayuktha
0

ಪುತ್ತೂರು : ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ದೈವಾರಾಧನೆ ಹಾಗೂ ಪಾರಂಪರಿಕ ಆಹಾರ ಪದ್ಧತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಆಟಿಕೂಟದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ರಾಜ್ಯ ಪುರಸ್ಕೃತ ದೈವನರ್ತಕ ಸೇರಲೋಕಯ್ಯ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ, ತುಳು ಸಂಘ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ಆಟಿಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ,

ತುಳುನಾಡಿನ ಸಂಸ್ಕೃತಿ ಹಾಗೂ ದೈವ-ದೇವರ ಆರಾಧನೆ ಕುರಿತು ತಿಳಿದುಕೊಳ್ಳುವುದು ಅಗತ್ಯ. ಪ್ರತಿಯೊಂದು ಜಾತಿ ಸಂಘದಲ್ಲಿಯೂ ಆಟಿಕೂಟ, ಕೆಸರ್‍ಡೊಂಜಿ ದಿನದಂತಹ ಆಚರಣೆಗಳು ನಡೆಯುತ್ತಿದ್ದು, ಇವು ನಮ್ಮ ಹಿಂದಿನ ಸಂಸ್ಕೃತಿಯನ್ನು ಉಳಿಸುವ ಪ್ರಯತ್ನಗಳಾಗಿವೆ. ಆಟಿ ಅಮಾವಾಸ್ಯೆಗೆ ತುಳುನಾಡಿನ ಸಂಪ್ರದಾಯದಲ್ಲಿ ವಿಶಿಷ್ಟ ಸ್ಥಾನವಿದೆ. ಹಿಂದಿನ ಕಾಲದ ಸಂಸ್ಕೃತಿಯನ್ನು ಸಂರಕ್ಷಿಸುವುದೇ ಆಟಿಯ ಉದ್ದೇಶ. ಕಾಲ ಬದಲಾಗಿಲ್ಲ, ನಾವು ಬದಲಾಗಿದ್ದೇವೆ. ಕತ್ತಲೆಯಿಂದ ಬೆಳಕಿನ ಕಡೆಗೆ ಕರೆದೊಯ್ಯುವ ಶಕ್ತಿ ಆಟಿಯಲ್ಲಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಮಾತನಾಡಿ, ತುಳುನಾಡನ್ನು ಪರಶುರಾಮ ಕ್ಷೇತ್ರ ಸೇರಿದಂತೆ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಇಲ್ಲಿನ ಪ್ರತಿಯೊಂದು ಪ್ರದೇಶದಲ್ಲಿಯೂ ವಿಭಿನ್ನ ಆಚರಣೆಗಳು, ಪದ್ಧತಿಗಳು ಮತ್ತು ಸಂಸ್ಕೃತಿಗಳು ಕಂಡುಬರುತ್ತವೆ. ಇತ್ತೀಚಿನ ದಿನಗಳಲ್ಲಿ ಪಾರಂಪರಿಕ ಆಹಾರ ಪದ್ಧತಿಗಳನ್ನು ಮರೆತು ಹೊಸ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ನಮ್ಮ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ನಡೆಯಬೇಕು ಎಂದು ಹೇಳಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ಯ ಭಟ್ ಮಾತನಾಡಿ, ತುಳುನಾಡಿನಲ್ಲಿ ಆಚರಿಸುವ ಪ್ರಮುಖ ಸಂಪ್ರದಾಯಗಳಲ್ಲಿ ಆಟಿಯೂ ಒಂದು. ಹಿಂದಿನ ಕಾಲದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪುರಸ್ಕೃತ ದೈವನರ್ತಕ ಸೇರಲೋಕಯ್ಯ ಅವರನ್ನು ಸನ್ಮಾನಿಸಲಾಯಿತು.


ಸಭಾ ಕಾರ್ಯಕ್ರಮದ ನಂತರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳು ನಡೆದವು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿಶೇಷ ಅಧಿಕಾರಿ (ಆಡಳಿತ) ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ., ತುಳು ಸಂಘದ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಂಕಿತ, ತುಳು ಸಂಘದ ಕಾರ್ಯದರ್ಶಿ ದೀಕ್ಷಿತ್ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ತುಳು ಸಂಘದ ಉಪಾಧ್ಯಕ್ಷೆ ಜೀವಿತ ಸ್ವಾಗತಿಸಿ, ತುಳು ಸಂಘದ ಅಧ್ಯಕ್ಷ ಅಕ್ಷಯ್ ವಂದಿಸಿ, ವಿದ್ಯಾರ್ಥಿನಿ ಚೈತನ್ಯ ಚಂದಪ್ಪ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top