ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯಲ್ಲಿ Wednesday Learning Series ಅಂಗವಾಗಿ “Discover,Develop, Dedicate” ಎಂಬ ವಿಶೇಷ ಕಾರ್ಯಕ್ರಮವನ್ನು ಬುಧವಾರ ಕಾಲೇಜಿನ ಟಿ. ಮೋಹನದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. (ಮೇಜರ್) ರಾಧಾಕೃಷ್ಣ ಎಂ. (ನಿವೃತ್ತ), ಮಾಸ್ಟರ್ ಫೆಸಿಲಿಟೇಟರ್ ಹಾಗೂ ತರಬೇತುದಾರರು, ಲೀಡರ್‌ಶಿಪ್ ಮತ್ತು ಎಚ್‌ಆರ್‌ಡಿ, ಮಣಿಪಾಲ–ಉಡುಪಿ, ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ ನೀಡಿದರು.
ತಮ್ಮ ಸಂವಾದದಲ್ಲಿ ಅವರು ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತುಕೊಳ್ಳುವುದು, ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು. ಸ್ವಯಂ ಅನ್ವೇಷಣೆಯಿಂದ ಜಾಗೃತ ನಾಗರಿಕತ್ವದತ್ತ ಸಾಗುವ ಪ್ರಕ್ರಿಯೆಯಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣಗಳು, ಉತ್ತಮ ಮೌಲ್ಯಗಳು, ಜವಾಬ್ದಾರಿಯುತ ನಡೆ ಹಾಗೂ ನಿರಂತರ ಕಲಿಕೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸ್ವಯಂ ಅರಿವು, ಕೌಶಲ್ಯಾಭಿವೃದ್ಧಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಹೆಜ್ಜೆಯಾಯಿತು. ಪ್ರಥಮ ಬಿಸಿಎ ವಿದ್ಯಾರ್ಥಿ ಶಶಿಧರ್ ಮಡಿವಾಳ್ ಸ್ವಾಗತಿಸಿ . ಪ್ರಥಮ ಬಿಬಿಎ ವಿದ್ಯಾರ್ಥಿನಿ ಸಮೀಕ್ಷ ಪೂಜಾರಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಸಾತ್ವಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
