ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ‘ಕೋಟಿ ತುಳಸಿ ಅರ್ಚನೆ’ – ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0


ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಹಾಗೂ ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸಹಯೋಗದೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕೃಷ್ಣ ಮಠದಲ್ಲಿ ಬರುವ 04-10-2026 ರಂದು ‘ಕೋಟಿ ತುಳಸಿ ಅರ್ಚನೆ’ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.


ಈ ಧಾರ್ಮಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಶುಭ ಸಂದರ್ಭದಲ್ಲಿ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಗೌರವಾಧ್ಯಕ್ಷರಾದ ಮಂಜುನಾಥ ಉಪಾಧ್ಯ, ಅಧ್ಯಕ್ಷರಾದ ಶ್ರೀಕಾಂತ್ ಉಪಾಧ್ಯ, ಕಾರ್ಯದರ್ಶಿ ದುರ್ಗಾಪ್ರಸಾದ್, ಕೋಶಾಧಿಕಾರಿ ಹಯವದನ ಭಟ್, ಹಿರಿಯ ವಕೀಲರಾದ ಜಯಪ್ರಕಾಶ್ ಕೆದ್ಲಾಯ ಮತ್ತು ಜಿಲ್ಲಾಧ್ಯಕ್ಷರಾದ ಸಂದೀಪ್ ಮಂಜ ಅವರು ಉಪಸ್ಥಿತರಿದ್ದರು.


ಅಲ್ಲದೆ, ಬ್ರಾಹ್ಮಣ ಸಭಾದ ಎಲ್ಲಾ ವಲಯಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top