ಮಂಗಳೂರು ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0



ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುರುವಾರ ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್, ಕದ್ರಿ ಶ್ರೀ ಮಂಜುನಾಥ ದೇವಳ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ರವಿರಾಜ್, ಸುಭಾಷ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.


ದರ್ಬಾರ್ ಮಂಟಪ ರಚನೆಗೆ ಮುಹೂರ್ತ



ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ.11ರಿಂದ ಅ.21.ವರೆಗೆ ಜರುಗುವ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವದಲ್ಲಿ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರು ಪ್ರತಿಷ್ಠಾಪನೆಗೊಳ್ಳಲಿರುವ ದರ್ಬಾರ್ ಮಂಟಪ ರಚನೆಗೆ ವೈದಿಕ ವಿಧಿವಿಧಾನಗಳೊಂದಿಗೆ ಮುಹೂರ್ತ ನೆರವೇರಿತು.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್, ಮೂಲ್ಕಿ ಸುವರ್ಣ ಆಟ್ಸ್‌ನ ಚಂದ್ರಶೇಖರ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top