ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 14-09-2026ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅಂದು ಬೆಳಿಗ್ಗೆ 10.30ರಿಂದ ಲೋಕಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಗಣಪತಿ ಹವನದ ಪೂರ್ಣಾಹುತಿ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಅಂದು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಈ ದೇವತಾ ಕಾರ್ಯದಲ್ಲಿ ಭಗವದ್ಭಕ್ತರೆಲ್ಲರೂ ಪಾಲ್ಗೊಳ್ಳಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಕೆ.ಸಿ. ನಾಯ್ಕ್ ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

