ಉಜಿರೆ: ಮಾನವ ಜನ್ಮವು ಅತ್ಯಂತ ಅಪರೂಪದ್ದು. ಕೇವಲ ತಿಂದು, ತಿರುಗಾಡಿ ಬದುಕುವುದು ಮಾತ್ರ ಜೀವನವಲ್ಲ; ಬದಲಿಗೆ ನೈತಿಕತೆ, ಮಾನವೀಯತೆ ಮತ್ತು ಸತ್ಪ್ರೀತಿಯಿಂದ ಕೂಡಿರುವುದೇ ನಿಜವಾದ ಜೀವನ ಎಂದು ವೇಣೂರು ಎಸ್.ಡಿ.ಎಂ ಐ.ಟಿ.ಐನ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಜೈನ್ ಅಭಿಪ್ರಾಯಪಟ್ಟರು.
ಇಲ್ಲಿನ ಎಸ್.ಡಿ.ಎಂ ಮಹಿಳಾ ಐ.ಟಿ.ಐನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ಜೀವನ ಕೌಶಲ್ಯ’ ವಿಷಯದ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಭೌತಿಕ ಸುಖಕ್ಕೆ ಸಿಗುವಷ್ಟು ಪ್ರಾಮುಖ್ಯತೆ ಜೀವನ ಮೌಲ್ಯಗಳಿಗೆ ಸಿಗುತ್ತಿಲ್ಲ. ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಹೆಚ್ಚಾಗುತ್ತಿದೆ. ಸತ್ಯ, ಪ್ರಾಮಾಣಿಕತೆ, ಕರುಣೆ, ಪ್ರೀತಿ, ಶಾಂತಿ ಮತ್ತು ಸಹನೆಯಂತಹ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಎಲ್ಲ ವರ್ಗದ ಜನರ ವಿಶ್ವಾಸ ಹೆಚ್ಚಿಸುವ ಪ್ರಯತ್ನ ಪ್ರತಿಯೊಬ್ಬರಿಂದಲೂ ಆಗಬೇಕಿದೆ, "ಮೌಲ್ಯಗಳಿಲ್ಲದ ಬದುಕು ಬೇರಿಲ್ಲದ ಮರದಂತೆ. ಆದ್ದರಿಂದ ನಾವೆಲ್ಲರೂ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸುಂದರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು" ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

