ಅಡ್ಯನಡ್ಕ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ಬಂಟ್ವಾಳ) ಹಾಗೂ ವಿಟ್ಲ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಮಿತಿಯ ಜಂಟಿ ಸಹಯೋಗದೊಂದಿಗೆ ಅಡ್ಯನಡ್ಕದ ಜನತಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸಲಾಗಿದ್ದ 14 ಮತ್ತು 17ರ ವಯೋಮಾನದೊಳಗಿನ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಕ್ರೀಡಾಕೂಟವು ಸೆಪ್ಟೆಂಬರ್ 19ರಂದು ಯಶಸ್ವಿಯಾಗಿ ಸಂಪನ್ನಗೊಂಡಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ 'ಅಡ್ಯನಡ್ಕ ಎಜುಕೇಶನಲ್ ಸೊಸೈಟಿ'ಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ವಹಿಸಿ, ವಿಜೇತರಿಗೆ ಸಮಗ್ರ ಹಾಗೂ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳನ್ನು ವಿತರಿಸಿದರು.
ಕಾರ್ಯಕ್ರಮದ ಪ್ರಮುಖ ಗಣ್ಯರು:
ಸಮಾರೋಪ ಸಮಾರಂಭದಲ್ಲಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಪ್ರೌಢಶಾಲಾ ಉಸ್ತುವಾರಿ ಗೋವಿಂದರಾಯ ಶೆಣೈ ಅಡ್ಯನಡ್ಕ, ಆಡಳಿತ ಮಂಡಳಿ ಸದಸ್ಯ ಉಪೇಂದ್ರ ಪೈ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಂ. ಕುಂಞ ನಾಯ್ಕ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ರಾಜೇಂದ್ರ ರೈ ಹಾಗೂ ವಿಟ್ಲ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಒಕ್ಕೂಟದ ನೋಡಲ್ ಅಧಿಕಾರಿ ಅಶೋಕ್ ಭಟ್ ಉಪಸ್ಥಿತರಿದ್ದರು.
ಅಲ್ಲದೆ, ಉಪ ನೋಡಲ್ ಅಧಿಕಾರಿ ಉಮೇಶ್, ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಟ್ಲ ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿದ್ಯಾಶಂಕರ್ ಡಿ., ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ನವೀನ್ ಕುಮಾರ್, ಬಿಂದು, ಜ್ಯೋತಿ, ಪುಷ್ಪಾ ಬಲ್ಲಾಳ್, ಚಂದ್ರಶೇಖರ್, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್., ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಮುಳಿಯ, ಜನತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಬಿ. ಮತ್ತು ಜನತಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೆ. ವಸಂತ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಕ್ರೀಡಾಧ್ವಜ ಹಸ್ತಾಂತರ:
ಮುಂದಿನ 2027-28ನೇ ಶೈಕ್ಷಣಿಕ ಸಾಲಿನ ವಿಟ್ಲ ವಲಯ ಮಟ್ಟದ ಕ್ರೀಡಾಕೂಟವು ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಕ್ರೀಡಾಧ್ವಜವನ್ನು ವಿಟ್ಲ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಬಿಂದು ಮೇಡಮ್ ಹಾಗೂ ವಿಠಲ ವಿದ್ಯಾಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಸಭಾ ಕಾರ್ಯಕ್ರಮ ಹಾಗೂ ಕೃತಜ್ಞತೆ:
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ಸ್ವಾಗತಿಸಿ ಪ್ರಸ್ತಾವನೆಗೈದರೆ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್. ಧನ್ಯವಾದ ಸಮರ್ಪಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು.
ಈ ಕ್ರೀಡಾಕೂಟದ ಯಶಸ್ಸಿಗೆ ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳು ಮತ್ತು ದಾನಿಗಳು ತನು-ಮನ-ಧನಗಳಿಂದ ಸಹಕರಿಸಿದ್ದಾರೆ. ವಿಟ್ಲ ವಲಯದ ಶಿಕ್ಷಕರ ಸಮಿತಿ, ದೈಹಿಕ ಶಿಕ್ಷಕರ ಒಕ್ಕೂಟ, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪೂರ್ಣ ಸಹಕಾರ ನೀಡಿ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ನಿರ್ವಹಿಸಿದರು.
