ಮಂಗಳೂರು ವಲಯ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿ : ಎ.ಜೆ. ಮೆಡಿಕಲ್ ಕಾಲೇಜು, ಎಸ್‌ಡಿಎಂ ಕಾಲೇಜಿಗೆ ಪ್ರಶಸ್ತಿ

Upayuktha
0

ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಸಹಯೋಗದಲ್ಲಿ ಮಂಗಳೂರು ವಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಟೇಬಲ್ ಟೆನ್ನಿಸ್ ಪಂದ್ಯಾವಳಿ 2026–27 ಸೆಪ್ಟೆಂಬರ್ 25ರಂದು ವಳಚ್ಚಿಲ್‌ನ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಕ್ಯಾಂಪಸ್‌ನಲ್ಲಿ ನಡೆಯಿತು.


ಪಂದ್ಯಾವಳಿಯಲ್ಲಿ ಒಟ್ಟು 18 ಕಾಲೇಜು ತಂಡಗಳು ಭಾಗವಹಿಸಿದ್ದವು. ಪುರುಷರ ವಿಭಾಗದಲ್ಲಿ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಪ್ರಥಮ ಸ್ಥಾನ ಪಡೆದುಕೊಂಡರೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.


ಮಹಿಳೆಯರ ವಿಭಾಗದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪತಿ ಆ್ಯಂಡ್ ಯೋಗಿಕ್ ಸೈನ್ಸಸ್ ಪ್ರಥಮ ಸ್ಥಾನ ಪಡೆದಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ ದ್ವಿತೀಯ ಸ್ಥಾನ ಗಳಿಸಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಮೇಶ್ ಎಚ್.ಎನ್. ಭಾಗವಹಿಸಿದ್ದರು. ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲ ಪ್ರೊ. ಪ್ರದೀಪ್ ಎಂ., ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್ ಗೌಡ, ದೈಹಿಕ ಶಿಕ್ಷಕಿ ಸುಪ್ರಿಯ ಅಡಿಗ ಹಾಗೂ ಶ್ರೀನಿವಾಸ ಗ್ರೂಪ್ ಆಫ್ ಕಾಲೇಜಸ್‌ನ ದೈಹಿಕ ಶಿಕ್ಷಕ ಪ್ರಣಮ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top