ಪುತ್ತೂರು ಅಕ್ಷಯ ಕಾಲೇಜಿನಲ್ಲಿ ಎಲೈಟ್ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ

Upayuktha
0

ಪುತ್ತೂರು: ಪುತ್ತೂರು ಅಕ್ಷಯ ಕಾಲೇಜಿನ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಂತರಿಕ ವಿನ್ಯಾಸ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಗ್ರಾಫಿಕ್ ವಿನ್ಯಾಸ ಕಾರ್ಯಾಗಾರವು ಅಕ್ಷಯ ಕಾಲೇಜಿನಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ. ಪಕ್ಕಳ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅದೀಕ್ಷಾ ಎಸ್. ಪೂಜಾರಿ ಅವರು ಭಾಗವಹಿಸಿ, ಗ್ರಾಫಿಕ್ ವಿನ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ಮೂಲಕ ಮಾಹಿತಿ ಹಾಗೂ ಪ್ರಾಯೋಗಿಕ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ರಶ್ಮಿ ಕೆ., ಎಲೈಟ್ ಅಸೋಸಿಯೇಷನ್ ಸಂಯೋಜಕರಾದ ನಿವೇದಿತಾ ಜೆ. ಎಸ್., ವಿದ್ಯಾರ್ಥಿ ಕಾರ್ಯದರ್ಶಿ ಸ್ಪೂರ್ತಿ ಕೆ. ಎನ್. ಹಾಗೂ ಸಹ ಕಾರ್ಯದರ್ಶಿ ಶರತ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ನಿವೇದಿತಾ ಜೆ. ಎಸ್. ಅವರು ನೆರವೇರಿಸಿದರು. ವಿದ್ಯಾರ್ಥಿನಿ ಸ್ಪೂರ್ತಿ ಅವರು ಸ್ವಾಗತಿಸಿದರು. ನಿಖಿತಾ ಹಾಗೂ ಸಂಗಡಿಗರು ಪ್ರಾರ್ಥನೆ ನೆರವೇರಿಸಿದರು. ವಿದ್ಯಾರ್ಥಿ ಶರತ್ ಅವರು ವಂದನಾರ್ಪಣೆ ಸಲ್ಲಿಸಿದರು. ದುರ್ಗಾಲಕ್ಷ್ಮಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.


ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ತಾಂತ್ರಿಕ ಕೌಶಲ್ಯ ಹಾಗೂ ವೃತ್ತಿಪರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top