ಅಕ್ಷಯ ಕಾಲೇಜಿನಲ್ಲಿ ಜಾಗತಿಕ ಹೃದಯ ದಿನ ಆಚರಣೆ

Shreya Hegde
0

  ಸಿಪಿಆರ್ (CPR) ಪ್ರಾತ್ಯಕ್ಷಿಕೆ ಹಾಗೂ ವಿಶೇಷ ಉಪನ್ಯಾಸ‌



ಪುತ್ತೂರು: ಜಾಗತಿಕ ಹೃದಯ ದಿನದ ಅಂಗವಾಗಿ ನಿನ್ನೆ (ಸೆಪ್ಟೆಂಬರ್ 29) ಅಕ್ಷಯ ಕಾಲೇಜಿನ ಸಹಯೋಗದಲ್ಲಿ ಹೃದಯ ಆರೋಗ್ಯ ಕುರಿತು ವಿಶೇಷ ಉಪನ್ಯಾಸ ಹಾಗೂ ತುರ್ತು ಸಂದರ್ಭದಲ್ಲಿ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆಯ (CPR) ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.


ಕಾರ್ಯಕ್ರಮದಲ್ಲಿ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಸುರೇಶ್ ಪುತ್ತೂರಾಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಅಮೂಲ್ಯ ಮಾಹಿತಿ ನೀಡಿದರು. ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಸಹಕಾರಿಯಾದ ಸಿಪಿಆರ್ (CPR) ವಿಧಾನದ ಕುರಿತು ಪ್ರಾಯೋಗಿಕವಾಗಿ ತೋರಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಡ್ ಕ್ರಾಸ್ ಚೇರ್ಮನ್ ಅವರ ಗೈರುಹಾಜರಿಯಲ್ಲಿ ವೈಸ್ ಚೇರ್ಮನ್ ಎ. ಪದ್ಮನಾಭ ಶೆಟ್ಟಿ ವಹಿಸಿದ್ದರು. ಅಕ್ಷಯ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ. ಪಕ್ಕಳ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.


ಕಾಲೇಜಿನ ಯುವ ರೆಡ್ ಕ್ರಾಸ್ ಅಧಿಕಾರಿ ದೀಕ್ಷಾ ರೈ ಅವರು ಎಲ್ಲರನ್ನು ಸ್ವಾಗತಿಸಿದರು. ರೆಡ್ ಕ್ರಾಸ್ ಪುತ್ತೂರು ಘಟಕದ ಕಾರ್ಯದರ್ಶಿ ಆಸ್ಕರ್ ಆನಂದ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಯೂನಿಕ್, ಕಾರ್ಯಕ್ರಮ ಉಪಸಮಿತಿ ಮುಖ್ಯಸ್ಥ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನ್ಹಸ್, ನಿರ್ದೇಶಕ ನವೀನ್ಚಂದ್ರ ನಾಯ್ಕ್ ಹಾಗೂ IQAC ಸಂಯೋಜಕರಾದ ರಶ್ಮಿ ಕೆ. ಉಪಸ್ಥಿತರಿದ್ದರು.


ಅಪೇಕ್ಷಾ ಶೆಟ್ಟಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರೆ, ರಕ್ಷಾ ಅವರು ವಂದನಾರ್ಪಣೆಗೈದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top