ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾ ಭಾರತಿ ವತಿಯಿಂದ ಆಯೋಜಿಸಿದ ಬೆಂಗಳೂರಿನ ಆರ್.ವಿ.ಕೆ. ಬನಶಂಕರಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಮೃದ್ದ್ ಎಲ್. ಶೆಟ್ಟಿ 200 ಮೀ. ಬ್ಯಾಕ್ ಸ್ಟ್ರೋಕ್ ಪ್ರಥಮ, 100 ಮೀ. ಬ್ಯಾಕ್ ಸ್ಟ್ರೋಕ್ ಪ್ರಥಮ, 100 ಮೀ. ಫ್ರೀ ಸ್ಟೈಲ್ ದ್ವಿತೀಯ, 400 ಮೀ ಫ್ರೀ ಸ್ಟೈಲ್ ದ್ವಿತೀಯ ಹಾಗೂ 400 ಮೀ. ಮಿಡ್ಲೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧಿಯಾಗಿ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲಾಸ್ಯ ಸಂತೋಷ್ 50 ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚು, 100 ಮೀ.ಬಟರ್ ಫ್ಲೈನಲ್ಲಿ ಬೆಳ್ಳಿ ಹಾಗೂ 100 ಮೀ.ಬ್ಯಾಕ್ ಸ್ಟ್ರೋಕ್‍ನಲ್ಲಿ ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
