ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಇತ್ತೀಚೆಗೆ ಹಾಸನದ ಭೂದೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ವಿದ್ಯಾಭಾರತಿ ಪ್ರಾಂತೀಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ಸೆಪ್ಟೆಂಬರ್‍ನಲ್ಲಿ ಹೈದರಾಬಾದ್‍ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರ 10ನೇ ತರಗತಿಯ ಸಾತ್ವಿಕ್ ಜಿ. ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬಾಲವರ್ಗದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ, ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ.ಶೈನಿ ಪಾಯಸ್ ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ಸಂಪ್ಯಾದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ.ಆರ್, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಲವರ್ಗದ ಬಾಲಕರು ಹಾಗೂ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿ ಸೆಪ್ಟೆಂಬರ್ ತಿಂಗಳಿನಲ್ಲಿ ಹೈದರಾಬಾದ್ ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


