ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Shreya Hegde
0


ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಬಪ್ಪಳಿಗೆಯ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳು ಭಗವದ್ಗೀತೆಯ ಧ್ಯಾನ ಶ್ಲೋಕ ಪಠಣ ಮಾಡಿದರು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳು ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿಕೊಟ್ಟರು. ಎಂಟನೇ ತರಗತಿಯ ವಿದ್ಯಾರ್ಥಿ ಶ್ರೀವತ್ಸ, ಗಂಟಾನಾದ ಹಾಗೂ ವಿಧಿ-ವಿಧಾನಗಳೊಂದಿಗೆ ಶ್ರೀಕೃಷ್ಣನ ವಿಗ್ರಹಕ್ಕೆ ಪೂಜೆ ನೆರವೇರಿಸಿದರು. ಬಾಲ ರಾಧಾ-ಕೃಷ್ಣರ ವೇಷ ಧರಿಸಿ ಬಂದಿದ್ದ ಮಕ್ಕಳಿಗೆ ಆರತಿ ಬೆಳಗಲಾಯಿತು ಮತ್ತು ವಿದ್ಯಾರ್ಥಿಗಳು ಶ್ರೀಕೃಷ್ಣನ ಕುರಿತಾದ ಹಾಡುಗಳಿಗೆ ಭಜನೆ ನಡೆಸಿದರು.


ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀಕೃಷ್ಣನ ಬಾಲಲೀಲೆಯ ಕಥೆ ಹೇಳುವುದು, ಶುಭಾಶಯ ಪತ್ರ ತಯಾರಿಕೆ ಹಾಗೂ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಅಕ್ಷರ ಎ. ಪ್ರಾರ್ಥಿಸಿದರು. ಸೌಪರ್ಣಿಕಾ ಎಸ್. ದಾನೇಗೊಂಡರ್ ಮತ್ತು ಮಾನ್ಯಲಕ್ಷ್ಮಿ ಎನ್. ಪಿ. ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top