ಬೆಳಕೆ ಗ್ರಾಪಂಗೆ ಸಾಮಾಜಿಕ ಪರಿಶೋಧನಾ ನಿರ್ದೇಶಕರ ಭೇಟಿ

Upayuktha
0

ಸಾಮಾಜಿಕ ಪರಿಶೋಧನೆ ಪ್ರಗತಿ ಪರಿಶೀಲನೆ; ಕೂಲಿಕಾರರೊಂದಿಗೆ ಸಂವಾದ



ಭಟ್ಕಳ: ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ಮಾನ್ಯ ಸಾಮಾಜಿಕ ಪರಿಶೋಧನಾ ನಿರ್ದೇಶಕರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಸಾಮಾಜಿಕ ಪರಿಶೋಧನೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನೆಯ ವಿವಿಧ ಹಂತಗಳು, ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳು ಹಾಗೂ ಪ್ರಗತಿಯ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಾಮಾಜಿಕ ಪರಿಶೋಧನೆ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ, ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಸಾಮಾಜಿಕ ಪರಿಶೋಧನೆಯ ಮಹತ್ವ ಹಾಗೂ ಅನುಷ್ಠಾನದ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.


ಪರಿಶೀಲನೆಯ ಬಳಿಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ VB-G RAM G ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿ, ಯೋಜನೆಯ ಅನುಷ್ಠಾನ, ಕೂಲಿ ಪಾವತಿ ಹಾಗೂ ಕೆಲಸದ ಅನುಭವದ ಕುರಿತು ಮಾಹಿತಿ ಪಡೆದುಕೊಂಡರು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಎಂ., ತಾಲೂಕು ಸಂಪನ್ಮೂಲ ವ್ಯಕ್ತಿ ಉಮೇಶ ಮುಂಡಳ್ಳಿ, ಚಿದಾನಂದ ಗೌಡ (ಹೊನ್ನಾವರ), ತಾಂತ್ರಿಕ ಸಂಯೋಜಕ ವಿನಾಯಕ ನಾಯಕ, AEE ಗಣೇಶ, ತೋಟಗಾರಿಕೆ ಅಧಿಕಾರಿ ಶ್ರವಣ ಕುಮಾರ, ಪಿಡಿಒ ರಾಜೇಶ್ವರಿ ಚಂದಾವರ, ತಾಂತ್ರಿಕ ಸಹಾಯಕಿ ಜಯಶ್ರೀ ನಾಯ್ಕ, VRP, BFT ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


ಸಾಮಾಜಿಕ ಪರಿಶೋಧನೆಯ ಮೂಲಕ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top