ಆರ್‌ಎಸ್‌ಎಸ್ ಪ್ರಮುಖರಿಗೆ ನೋಟಿಸ್ ಖಂಡನೀಯ: ಶಾಸಕ ಭರತ್ ಶೆಟ್ಟಿ

Shreya Hegde
0


ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ದಿವಾಳಿ ಎದ್ದಿದ್ದು, ಜನರ ಗಮನ ಬೇರೆಡೆ ಸೆಳೆಯಲು ಆರ್‌ಎಸ್‌ಎಸ್ ಪ್ರಮುಖರನ್ನು ಗುರಿಯಾಗಿಸಿಕೊಳ್ಳುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ಆರೋಪಿಸಿದ್ದಾರೆ.


ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟಿಸ್ ನೀಡಿರುವುದು ಖಂಡನೀಯ. ಆರ್‌ಎಸ್‌ಎಸ್ ಮೇಲಿನ ದ್ವೇಷವನ್ನು  ಪ್ರಸ್ತುತ ಸನ್ನಿವೇಶವನ್ನು ಬೇರೆ ಕಡೆಗೆ ತಿರುಗಿಸಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷಪೂರಕವಾಗಿ ಜಾರಿಗೊಳಿಸಲು ಯತ್ನಿಸುತ್ತಿದ್ದಾರೆ. ನೋಟಿಸ್ ಜಾರಿ ಮೂಲಕ ಸಂಘಟನೆಯ ತೇಜೋಭಂಗಕ್ಕೆ ಯತ್ನಿಸಿದಂತಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಆರ್‌ಎಸ್‌ಎಸ್ ಸಂಘ ಪರಿವಾರವನ್ನು ತುಳಿಯಲು ಪ್ರಯತ್ನಿಸಿದಷ್ಟು ಅದು ಬಲಾಢ್ಯವಾಗಿ ಬೆಳೆಯುತ್ತದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೀಡಿರುವ ಪೊಲೀಸ್ ನೋಟಿಸ್‌ನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಗೂಂಡಾ ಕಾಯ್ದೆಯನ್ನು ಒಂದು ವರ್ಗವನ್ನು ಸಂತೋಷಪಡಿಸಲು ಹೇರಿದಂತೆ ಕಾಣುತ್ತಿದೆ. ಸರ್ಕಾರದ ಇಂತಹ ಹಿಂದೂ ವಿರೋಧಿ ನೀತಿಗಳು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಚೇತರಿಸಿಕೊಳ್ಳಲು ಸಾಧ್ಯವಾಗದಂತೆ ಮರ್ಮಾಘಾತ ನೀಡಲಿದೆ. ಇದೀಗ ನಿಮ್ಮ ಸಮಯ, ನಮ್ಮ ಸಮಯಕ್ಕಾಗಿ ಕಾಯುತ್ತೇವೆ ಎಂದು ಹೇಳಿದ್ದಾರೆ.


ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸಲು ಕಾಂಗ್ರೆಸ್ ಪರೋಕ್ಷವಾಗಿ ಪೊಲೀಸ್ ಇಲಾಖೆಯನ್ನು ಗುರಾಣಿಯಾಗಿ ಬಳಸುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗದೆ ಸ್ವಂತ ವಿವೇಚನೆಯಿಂದ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top